ಕಲಬುರ್ಗಿ: ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿರುವ ಘಟನೆಯನ್ನು ಶಾಸಕಹಾಗೂ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಯಾದಗಿರಿಯ ಘಟನೆ ನಾಚಿಕೆಗೇಡಿನಿಂದ ಕೂಡಿದೆ. ಈ ಘಟನೆ ಇಂದಿನ ಯುವಕರ ಕುಸಿಯುತ್ತಿರುವ ನೈತಿಕತೆಯ ಸಂಕೇತವಾಗಿರುವುದಲ್ಲದೇ, ತಾವು ಏನು ಬೇಕಾದರೂ ಮಾಡಬಹುದು ಎನ್ನುವ ಅವರ ಧೋರಣೆಯನ್ನು ತೋರಿಸುತ್ತಿದೆ ಎಂದಿದ್ದಾರೆ.
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸರ್ಕಾರವನ್ನೂ ಟೀಕಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.