ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ವಿರುದ್ಧ ಕಾಂಗ್ರೆಸ್‌ ಆಕ್ರೋಶ

Last Updated 1 ನವೆಂಬರ್ 2020, 3:19 IST
ಅಕ್ಷರ ಗಾತ್ರ

ಕಲಬುರ್ಗಿ: ಕೇಂದ್ರ ಸರ್ಕಾರವು ರೈತರ ಮತ್ತು ಜನವಿರೋಧ ನೀತಿ ಅನುಸರಿಸು‌ತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಜಿಲ್ಲಾ ಘಟಕದ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಶನಿವಾರ ಧರಣಿ ನಡೆಸಿದರು.

ಕೇಂದ್ರದ ಬಿಜೆಪಿ ಸರ್ಕಾರ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡುವ ಮೂಲಕ ರೈತರಿಗೆ ಅನ್ಯಾಯ ಮಾಡಿದೆ. ಕಾರ್ಮಿಕ ಕಾಯ್ದೆ ತಿದ್ದುಪಡಿ ಮೂಲಕ ಕೋಟ್ಯಂತರ ಕಾರ್ಮಿಕರಿಗೆ ಸಮಸ್ಯೆ ಮಾಡಿದೆ. ಬಿಜೆಪಿ ಸರ್ಕಾರ ರೈತರನ್ನು ಕಡೆಗಣಿಸುತ್ತಿದೆ. ಜಿಲ್ಲೆಯಲ್ಲಿ ಮಳೆಯಿಂದ ಬೆಳೆ ಹಾನಿಯಾಗಿದ್ದರೂ ಪರಿಹಾರ ನೀಡುತ್ತಿಲ್ಲ ಎಂದು ಆರೋಪಿಸಿದರು.

ಬೆಳೆ ಹಾನಿ ಕುರಿತು ಸಮೀಕ್ಷೆ ನಡೆಸಿ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಬೇಕು, ಪ್ರವಾಹಕ್ಕೆ ತುತ್ತಾಗಿ ಮನೆ ಕಳೆದುಕೊಂಡು ನಿರಾಶ್ರಿತರಾದವರ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.

ಶಾಸಕಿ ಕನೀಜ್ ಫಾತಿಮಾ, ವಿಧಾನ ಪರಿಷತ್‌ ಮಾಜಿ ಸದಸ್ಯರಾದ ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ ಹಾಗೂ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT