ಮಂಗಳವಾರ, ಆಗಸ್ಟ್ 3, 2021
24 °C
ಫರಹತಾಬಾದ್‌ನಲ್ಲಿ ಶಾಸಕ ಎಂ.ವೈ. ಪಾಟೀಲ ನೇತೃತ್ವದಲ್ಲಿ ಸೈಕಲ್ ಜಾಥಾ

ತೈಲ ಬೆಲೆ ಹೆಚ್ಚಳ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ಪ್ರಸ್ತುತ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದಿನೇ ದಿನೇ ಬೆಲೆ ಏರಿಕೆ ಮಾಡುವ ಮೂಲಕ ಜನವಿರೋಧಿ ಸರ್ಕಾರಗಳು ಎಂದು ಸಾಬೀತುಪಡಿಸುತ್ತಿವೆ ಎಂದು ಶಾಸಕ ಎಂ.ವೈ.ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

ಫರಹತಾಬಾದ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಆಯೋಜಿಸಿದ್ದ ಸೈಕಲ್ ಜಾಥಾದಲ್ಲಿ ಭಾಗವಹಿಸಿ ಉಪತಹಸೀಲ್ದಾರ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ‘ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಡಜನರು ಬದುಕುವುದು ದುಸ್ತರವಾಗಿದೆ. ದಿನಸಿ ಸಾಮಾನುಗಳು, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅನೇಕ ವಸ್ತುಗಳನ್ನು ದಿನೇ ದಿನೇ ಬೆಲೆ ಏರಿಕೆ ಹೆಚ್ಚು ಮಾಡುವ ಮೂಲಕ ಬಡಜನರ ಹೊಟ್ಟೆ ಮೇಲೆ ‌ಬರೆ ಎಳೆಯುತ್ತಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ‌ನಡೆಯನ್ನು ಬಲವಾಗಿ ಖಂಡಿಸುತ್ತೇವೆ’ ಎಂದು ಹೇಳಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಫರಹತಾಬಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ತಿಬಶೆಟ್ಟಿ, ಸೋಮಶೇಖರ ಕಲಬುರ್ಗಿ, ಮಹಾಂತೇಶ ಕವಲಗಿ, ರಾಮ ಹಸರಗುಂಡಗಿ, ಮಶಾಕ ಪಟೇಲ್, ಹುಸೇನ್, ಚಂದ್ರಕಾಂತ ನಡಗಟ್ಟಿ, ಜ್ಯೋತಿ ಮರಗೋಳ, ಮಲ್ಲು ಖನ್ನಾ, ಸಿದ್ರಾಮಪ್ಪ ಶಖಾಪೂರ, ಅನಿಲಕುಮಾರ ಕೋಣಿನ, ನಾಗೇಂದ್ರಪ್ಪ ನಿಂಬರ್ಗಿ, ಶಿವಕುಮಾರ್ ಶರ್ಮಾ, ಶರಣು ಹಾಗರಗುಂಡಗಿ, ಚಂದ್ರು ಹಾಗರಗುಂಡಗಿ, ಜಯಪ್ರಕಾಶ್ ಹಾಗರಗುಂಡಗಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.