ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕರ ಖರೀದಿ ಆರೋಪ: ಅಮಿತ್‌ ಶಾ ವಜಾಕ್ಕೆ ಕಾಂಗ್ರೆಸ್‌ ಒತ್ತಾಯ

Last Updated 5 ನವೆಂಬರ್ 2019, 11:04 IST
ಅಕ್ಷರ ಗಾತ್ರ

ಕಲಬುರ್ಗಿ: ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಶಾಸಕರನ್ನು ಸೆಳೆದು ಮುಂಬೈನಲ್ಲಿ ಐಷಾರಾಮಿ ಹೋಟೆಲ್‌ನಲ್ಲಿ ಇರಿಸಿ ಮೈತ್ರಿ ಸರ್ಕಾರ ಕೆಡವಿದ್ದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಪಾತ್ರ ಇದೆ ಎಂದು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಹೇಳಿದ್ದ ಆಡಿಯೊ ಹೊರ ಬಿದ್ದಿದೆ. ನೈತಿಕ ಹೊಣೆ ಹೊತ್ತು ಶಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಯುವ ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿ ಸೋಮವಾರ‌ಪ್ರತಿಭಟನೆ ನಡೆಸಿದರು.‌

ಹಣದ ಆಮಿಷ ಒಡ್ಡಿ ಎರಡೂ ಪಕ್ಷಗಳ ಶಾಸಕರನ್ನು ಅಮಿತ್‌ ಶಾ ಖರೀದಿಸಿದ್ದಾರೆ. ಈ ಬಗ್ಗೆ ಆಡಿಯೊದಲ್ಲಿ ಸಂಪೂರ್ಣ ವಿವರಗಳಿವೆ. ಸಂವಿಧಾನಬಾಹಿರವಾಗಿ ನಡೆದ ಈ ಕೃತ್ಯಕ್ಕೆ ಶಾ ಅವರೇ ಹೊಣೆ, ಹೀಗಾಗಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಅಸಂವಿಧಾನಿಕ ಪಕ್ಷಾಂತರ ನಿಲ್ಲಿಸಿ, ಪ್ರಜಾಪ್ರಭುತ್ವ ಉಳಿಸಿ ಎಂಬ ಘೋಷಣೆಗಳನ್ನು ಕಾರ್ಯಕರ್ತರು ಕೂಗಿದರು. ಯುವ ಕಾಂಗ್ರೆಸ್‌ ಅಧ್ಯಕ್ಷ ಈರಣ್ಣ ಝಳಕಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT