ಕಾಳಗಿ(ಕಲಬುರಗಿ ಜಿಲ್ಲೆ): ಇಲ್ಲಿನ ಪಟ್ಟಣ ಪಂಚಾಯಿತಿಗೆ ಇದೇ ಮೊದಲ ಬಾರಿಗೆ ನಡೆದ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಬುಧವಾರ ಪ್ರಕಟಗೊಂಡಿದ್ದು, ಕಾಂಗ್ರೆಸ್ ಸರಳ ಬಹುಮತ ಗಳಿಸಿದೆ.

ಒಟ್ಟು 11 ವಾರ್ಡ್ಗಳ 11 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ 6 ಅಭ್ಯರ್ಥಿಗಳು, ಬಿಜೆಪಿಯ 5 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಪಟ್ಟಣದಲ್ಲಿ ಸ್ಥಳೀಯವಾಗಿ ಒಟ್ಟು 8 ಸ್ಥಾನಗಳಲ್ಲಿ 6 ಕಾಂಗ್ರೆಸ್, 2 ಬಿಜೆಪಿ ಗೆದ್ದಿದೆ. ಆರು ತಾಂಡಾಗಳ 3 ಸ್ಥಾನಗಳಲ್ಲಿ 3 ಬಿಜೆಪಿ ಅಭ್ಯರ್ಥಿಗಳು ವಿಜೇತರಾಗಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ತವರು ಪಟ್ಟಣವಾದ ಕಾಳಗಿ ಪಟ್ಟಣದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದರೆ, ಕ್ಷೇತ್ರದ ಶಾಸಕ ಡಾ.ಅವಿನಾಶ ಜಾಧವ ತಾಂಡಾಗಳಲ್ಲಿ ತಮ್ಮ ಹಿಡಿತ ಸಾಧಿಸಿದಂತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.