ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಲೆ‌ ಹಚ್ಚಿ ಅಡುಗೆ ಮಾಡಿದ  ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು

ಅಡುಗೆ ಅನಿಲ ಬೆಲೆ ಏರಿಕೆಗೆ ವಿರೋಧ
Last Updated 25 ಡಿಸೆಂಬರ್ 2020, 6:44 IST
ಅಕ್ಷರ ಗಾತ್ರ

ಕಲಬುರ್ಗಿ: ಕೇಂದ್ರ ಬಿಜೆಪಿ ಸರ್ಕಾರ ‌ಅಡುಗೆ ಅನಿಲ ಬೆಲೆಯನ್ನು ಹೆಚ್ಚಳ ಮಾಡಿದ ಕ್ರಮವನ್ನು ಖಂಡಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹಾಗೂ ಶಾಸಕಿ ಕನೀಜ್ ಫಾತಿಮಾ ನೇತೃತ್ವದಲ್ಲಿ ‌ಪ್ರತಿಭಟನೆ ನಡೆಸಿದರು.

ಒಲೆ ಹಚ್ಚಿ ಚಪಾತಿ ಹಾಗೂ ಚಹಾ ತಯಾರಿಸಿ ಇಲ್ಲಿ‌ ಜಗತ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ‌ ಕಾರ್ಯಕರ್ತೆಯರು ಕೇಂದ್ರದ ಜನವಿರೋಧಿ‌ ನೀತಿಗಳ ‌ವಿರುದ್ದ ನಿರಂತರ ಪ್ರತಿಭಟನೆ ನಡೆಯಲಿದೆ ಎಂದರು.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ‌ಸಂದರ್ಭದಲ್ಲಿ ಬೆಲೆಗಳನ್ನು ನಿಯಂತ್ರಣ ಮಾಡಿತ್ತು.‌ ಆರು ವರ್ಷಗಳಿಂದ ಅಚ್ಛೆ ದಿನ್ ತರುವುದಾಗಿ‌‌ ಭರವಸೆ ನೀಡುತ್ತಲೇ ಇರುವ ಪ್ರಧಾನಿ ನರೇಂದ್ರ ‌ಮೋದಿ ಅವರು ಅಡುಗೆ ಅನಿಲ ದರವನ್ನು ಏಕಾಏಕಿ ₹ 100 ಹೆಚ್ಚಿಸುವ ಮೂಲಕ ಮಹಿಳೆಯರಿಗೆ ಕಣ್ಣೀರು ಹಾಕಿಸುತ್ತಿದ್ದಾರೆ ಎಂದು ಪುಷ್ಪಾ ಅಮರನಾಥ್ ದೂರಿದರು.

ಜಿಲ್ಲಾ‌ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ‌ ರವಿ ರಾಠೋಡ, ಪದಾಧಿಕಾರಿಗಳಾದ ಚಂದ್ರಿಕಾ ಪರಮೇಶ್ವರ, ಮಹೇಶ್ವರಿ ವಾಲಿ, ಗೀತಾ ಮುದಗಲ್, ಸಂಗೀತಾ ಪಾಟೀಲ, ಜಯಶ್ರೀ ‌ಚಿಂತಪಳ್ಳಿ ಹೈಮದಿ ಬೇಗಂ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT