ಮಂಗಳವಾರ, ಮಾರ್ಚ್ 9, 2021
31 °C
ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಮೆರವಣಿಗೆ, ಬಹಿರಂಗಸ ಸಭೆ

26ರಂದು ಸಂವಿಧಾನ ವಿಜಯೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಗಣರಾಜ್ಯೋತ್ಸವ ದಿನದ ಅಂಗವಾಗಿ ಇದೇ 26ರಂದು ನಗರದ ಎಸ್‌ವಿಪಿ ವೃತ್ತದಿಂದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದವರೆಗೆ 72ನೇ ಗಣರಾಜ್ಯೋತ್ಸವದ ಅಂಗವಾಗಿ ಸಂವಿಧಾನ ವಿಜಯೋತ್ಸವ ಮೆರವಣಿಗೆ ಹಾಗೂ ಬಹಿರಂಗ ಸಭೆಯನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಅರ್ಜುನ ಭದ್ರೆ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇಂದು ನಾವು ಎದುರಿಸುತ್ತಿರುವ ಸಮಸ್ಯೆಗಳಿಗೆ, ಸವಾಲುಗಳಿಗೆ ಸಂವಿಧಾನ ಸರಿದಾರಿಯಾಗಿದೆ. ನಾವು ಸುರಕ್ಷಿತವಾಗಿ ಬದುಕಲು, ನಮಗೋಸ್ಕರ, ನಮ್ಮ ಮುಂದಿನ ಪೀಳಿಗೆಗಾಗಿ ಸಂವಿಧಾನವನ್ನು ಅದರ ಆಶಯಗಳನ್ನು ರಕ್ಷಿಸಿಕೊಳ್ಳಲು ನಾವೆಲ್ಲರೂ ಸಂವಿಧಾನವನ್ನು ಓದಬೇಕು. ಅರ್ಥೈಸಬೇಕು. ಮೂಲತತ್ವಗಳನ್ನು ಮೈಗೂಡಿಸಿಕೊಳ್ಳಬೇಕು ಮತ್ತು ಅದರಂತೆ ನಡೆದುಕೊಳ್ಳಬೇಕಿದೆ. ಹಾಗಾಗಿ, ಈ ವಿಜಯೋತ್ಸವ ಆಯೋಜಿಸಲಾಗಿದೆ‌’ ಎಂದರು.

ಮೆರವಣಿಗೆಗೆ ಸಣ್ಣ ನೀರಾವರಿ ಇಲಾಖೆ ಅಧೀಕ್ಷಕ ಎಂಜಿನಿಯರ್ ಸುರೇಶ ಶರ್ಮಾ ಚಾಲನೆ ನೀಡುವರು. ಬಹಿರಂಗ ಸಭೆಯನ್ನು ಕಾಂಗ್ರೆಸ್ ಮುಖಂಡ ಜೆ.ಎಂ. ಕೊರಬು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂಘಟನೆಯ ಯಾದಗಿರಿ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ವಹಿಸಲಿದ್ದಾರೆ. ವಿಧಾನಪರಿಷತ್ ಮಾಜಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಜನವಾದಿ ಮಹಿಳಾ ಸಂಘಟನೆ ರಾಜ್ಯ ಉಪಾಧ್ಯಕ್ಷೆ ಕೆ. ನೀಲಾ, ವೀರಶೈವ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಅರುಣಕುಮಾರ ಪಾಟೀಲ ಕೊಡಲಹಂಗರಗಾ, ಎಪಿಎಂಸಿ ಮಾಜಿ ಸದಸ್ಯ ಮಿರಾಜೊದ್ದೀನ್ ಪಟೇಲ್, ಹಣಮಗೌಡ ಬೀರನಕಲ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸಂಘಟನೆಯ ಜಿಲ್ಲಾ ಸಂಚಾಲಕ ಮಹಾಂತೇಶ ಬಡದಾಳ, ಮಲ್ಲಿಕಾರ್ಜುನ ಕ್ರಾಂತಿ, ಜಿಲ್ಲಾ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಖನ್ನಾ, ನಗರ ಘಟಕದ ಕಪಿಲ ಸಿಂಗೆ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು