‘ಸಂವಿಧಾನ ರಕ್ಷಣೆ ಎಲ್ಲರ ಹೊಣೆ’

7

‘ಸಂವಿಧಾನ ರಕ್ಷಣೆ ಎಲ್ಲರ ಹೊಣೆ’

Published:
Updated:
Deccan Herald

ಕಲಬುರ್ಗಿ: ‘ಶೋಷಿತ ಸಮುದಾಯದವರು ಸಂವಿಧಾನವನ್ನು ಅಧ್ಯಯನ ಮಾಡಬೇಕು. ಸಂವಿಧಾನದ ರಕ್ಷಣೆ ಎಲ್ಲರ ಹೊಣೆಯಾಗಿದೆ’ ಎಂದು ರಾಮಚಂದ್ರ ಗೋಳಾ ಹೇಳಿದರು.

ನಗರದ ಕನ್ನಡ ಭವನದಲ್ಲಿ ಭಾರತೀಯ ದಲಿತ ಪ್ಯಾಂಥರ್ ವಿದ್ಯಾರ್ಥಿ ಒಕ್ಕೂಟ ವತಿಯಿಂದ ಸೋಮವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿರುವ ಮಲ್ಲಪ್ಪ ಹೊಸಮನಿ ಅವರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಭಾರತ ದೇಶದ ಮೂಲ ನಿವಾಸಿಗಳಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳು ಸಮಾಜದಲ್ಲಿ ಸದೃಢರಾಗಬೇಕು’ ಎಂದರು.

ಹಿರಿಯ ಮುಖಂಡ ವಿಠ್ಠಲ ದೊಡ್ಡಮನಿ ಮಾತನಾಡಿ, ‘ದಲಿತರು ಅಂಬೇಡ್ಕರ್ ಸಿದ್ಧಾಂತವನ್ನು ಮೈಗೂಡಿಸಿಕೊಂಡು ಅಂಬೇಡ್ಕರ್ ಕನಸಿನ ನವ ಭಾರತ ನಿರ್ಮಾಣಕ್ಕೆ ಕಂಕಣಬದ್ಧರಾಗಿ ನಿಲ್ಲಬೇಕು’ ಎಂದು ಹೇಳಿದರು.

ಮಲ್ಲಪ್ಪ ಹೊಸಮನಿ, ರಾಜಕುಮಾರ ಕಪನೂರ, ಅರ್ಜುನ ಭದ್ರೆ, ಕಲ್ಯಾಣರಾವ ಡೊಣ್ಣೂರ, ಸುರೇಶ ಹಾದಿಮನಿ, ಪ್ರಕಾಶ ಮೂಲಭಾರತಿ, ರಮೇಶ ಚಿಮ್ಮಾಇದ್ಲಾಯಿ ಮಾತನಾಡಿದರು.

ಜಿಲ್ಲಾ ಘಟಕದ ಅಧ್ಯಕ್ಷ ಗಂಗಾಧರ ಮಾಡಬೂಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಈರಣ್ಣ ಹಡಪದ, ಮಿಲಿಂದ ಸನಗುಂದಿ, ಲಕ್ಷ್ಮಿಕಾಂತ ಹುಬಳಿ, ಖಾಶಿನಾಥ ದಿವಂಟಗಿ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !