ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ | ಕಾನೂನು ಉಲ್ಲಂಘಿಸಿ ಕಲ್ಯಾಣ ಮಂಟಪ ನಿರ್ಮಾಣ: ಆರೋಪ

Published 4 ಜುಲೈ 2024, 14:36 IST
Last Updated 4 ಜುಲೈ 2024, 14:36 IST
ಅಕ್ಷರ ಗಾತ್ರ

ಕಲಬುರಗಿ: ‘ಕಲಬುರಗಿ ತಾಲ್ಲೂಕಿನ ಕಾಳಗನೂರಿನಲ್ಲಿ ನಿಯಮಗಳನ್ನು ಉಲ್ಲಂಘಿಸಿ ಕಾನೂನು ಬಾಹಿರವಾಗಿ ಶಾಲೆಯ ಸಮೀಪವೇ ಕಲ್ಯಾಣ ಮಂಟಪ ನಿರ್ಮಿಸಲಾಗುತ್ತಿದೆ. ಇದರ ಹಿಂದೆ ಪ್ರಭು ರಾವೂರ ಎಂಬುವರು ಇದ್ದಾರೆ’ ಎಂದು ಸಾಮಾಜಿಕ ಹೋರಾಟಗಾರ ರಾಮ ರಾಠೋಡ ದೂರಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ಕಾಳಲಿಂಗೇಶ್ವರ ದೇವಸ್ಥಾನದ ಬಳಿ ಕಲ್ಯಾಣ ಮಂಟಪ ನಿರ್ಮಿಸಲಾಗುತ್ತಿದೆ. ಅದಕ್ಕೆ ಸಣ್ಣೂರ ಪಿಡಿಒ, ಅಧ್ಯಕ್ಷರು ಹಾಗೂ ತಾಲ್ಲೂಕು ‍ಪಂಚಾಯಿತಿ ಅಧಿಕಾರಿ ನೆರವು ನೀಡಿದ್ದಾರೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಗಮನ ಸೆಳೆದ ಬಳಿಕ ಲೋಕೋಪಯೋಗಿ ಇಲಾಖೆಯ ಎಇಇ ಸ್ಥಳ ಪರಿಶೀಲಿಸಿ, ದಾಖಲೆಗಳನ್ನು ಪರಿಶೀಲಿಸಿ, ಈ ಪ್ರದೇಶವು ಕಲ್ಯಾಣ ಮಂಟಪ ನಿರ್ಮಿಸಲು ಯೋಗ್ಯವಿಲ್ಲ ಎಂದು ಪತ್ರ ನೀಡಿದ್ದಾರೆ’ ಎಂದು ವಿವರಿಸಿದರು.

‘ಕಲ್ಯಾಣ ಮಂಟಪಕ್ಕೆ ಈಗಾಗಲೇ ₹50 ಲಕ್ಷ ಮಂಜೂರಾಗಿದೆ. ಸಾರ್ವಜನಿಕರ ತೆರಿಗೆ ದುಡ್ಡು ಪೋಲಾಗುವ ಅಪಾಯವಿದೆ. ಸಂಬಂಧಪಟ್ಟ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ನಾಗೇಂದ್ರಪ್ಪ ಮೀಸಿ, ಜಗಪ‍್ಪ ಕಂಟೀಕರ, ಗಿಡ್ಡೆಪ್ಪ ಲಕ್ಷ್ಮಣ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT