ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಟ್ಟಡ ಕಾರ್ಮಿಕರಿಗೆ ವಸತಿ ಒದಗಿಸಲು ಆಗ್ರಹ

Last Updated 27 ನವೆಂಬರ್ 2022, 13:09 IST
ಅಕ್ಷರ ಗಾತ್ರ

ಕಲಬುರಗಿ: ರಾಜ್ಯ ಸರ್ಕಾರದ ವಿವಿಧ ವಸತಿ ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿ ಇಲ್ಲದೇ ಇರುವುದರಿಂದ ಕಟ್ಟಡ ಕಾರ್ಮಿಕರಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ)ಯು ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಕಟ್ಟಡ ಕಾರ್ಮಿಕರಿಗಾಗಿ ವಸತಿ ನೀಡಲು ಕ್ರಿಯಾ ಯೋಜನೆ ರೂಪಿಸಬೇಕು ಎಂದು ನವ ಕಲ್ಯಾಣ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘವು ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅವರಿಗೆ ಮನವಿ ಸಲ್ಲಿಸಿದೆ.

ಕಳೆದ ಹಲವು ವರ್ಷಗಳಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಮೀಸಲಾತಿಯನ್ವಯ ಒದಗಿ ಬಂದ ಅನುದಾನದಲ್ಲಿ ವಸತಿಗಾಗಿ ಬಳಕೆ ಮಾಡಿಕೊಂಡಿಲ್ಲ. ಸರ್ಕಾರ ಮತ್ತು ಕೆಕೆಆರ್‌ಡಿಬಿ ವಸತಿ ಯೋಜನೆಗಾಗಿ ಹಣ ಬಿಡುಗಡೆ ಮಾಡಿಲ್ಲ. ಹಾಗಾಗಿ, ಇನ್ನು ಮುಂದೆ ಮಂಡಳಿಯಿಂದ ಕ್ರಿಯಾ ಯೋಜನೆಯನ್ನು ರೂಪಿಸುವಾಗ ಕಟ್ಟಡ ಕಾರ್ಮಿಕರ ವಸತಿ ಯೋಜನೆಗಾಗಿ ಹಣವನ್ನು ನೀಡಬೇಕು. ಆ ಹಣದಿಂದ ಕಾರ್ಮಿಕರಿಗೆ ಉಚಿತವಾಗಿ ನಿವೇಶನ ಹಾಗೂ ಮನೆಗಳನ್ನು ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು.

ಸಂಘದ ಅಧ್ಯಕ್ಷ ಭೀಮರಾಯ, ಉಪಾಧ್ಯಕ್ಷ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಮರೆಪ್ಪ, ಸಹ ಕಾರ್ಯದರ್ಶಿ ಶರಣಪ್ಪ, ಖಜಾಂಚಿ ದೇವಿಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT