ಗುರುವಾರ , ಮಾರ್ಚ್ 23, 2023
28 °C

ಕೆಕೆಆರ್‌ಡಿಬಿ ಕಾಮಗಾರಿಗಳ ಬಿಲ್ ಪಾವತಿಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅನುದಾನದಲ್ಲಿ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರಿಗೆ ಐದು ತಿಂಗಳಾದರೂ ಬಿಲ್ ನೀಡಿಲ್ಲ. ಕೂಡಲೇ ಬಿಲ್ ಪಾವತಿಸಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಗುತ್ತಿಗೆದಾರರು ಸಂಕಷ್ಟಕ್ಕೀಡಾಗುತ್ತಾರೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅವರಿಗೆ ಒತ್ತಾಯಿಸಿದೆ.

ನಗರದಲ್ಲಿ ಸೋಮವಾರ ಸಭೆ ನಡೆಸಿದ ಅವರು, ಕಾಮಗಾರಿಗಳ ಅರ್ಧ ಕೆಲಸ ಮುಗಿದು ಮೂರನೇ ತಂಡದ ಪರಿವೀಕ್ಷಣಾ ವರದಿಗಳ ಜೊತೆಗೆ ಬಿಲ್ ಸಲ್ಲಿಸಿ ನಾಲ್ಕೈದು ತಿಂಗಳು ಗತಿಸಿದರೂ ಬಿಲ್ ಪಾವತಿಯಾಗದ್ದರಿಂದ ಆರು ಜಿಲ್ಲೆಗಳ 300ಕ್ಕೂ ಅಧಿಕ ಕಾಮಗಾರಿಗಳು ಸ್ಥಗಿತಗೊಂಡಿವೆ. ಮಾರುಕಟ್ಟೆಯಲ್ಲಿ ದರಗಳು ಹೆಚ್ಚಾಗುತ್ತಿದ್ದು, ಯಾವುದೇ ದಂಡ ವಿಧಿಸದೇ ಕಾಮಗಾರಿ ಅವಧಿ ವಿಸ್ತರಿಸಬೇಕು ಎಂದು ಆಗ್ರಹಿಸಿದರು.

ಸಂಘದ ಸಂಘಟನಾ ಕಾರ್ಯದರ್ಶಿ ಜಗನ್ನಾಥ ಬಿ.ಶೇಗಜಿ, ನಿರ್ದೇಶಕ ಎಂ.ಕೆ. ಪಾಟೀಲ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.