ಗುರುವಾರ , ಜೂನ್ 17, 2021
21 °C

ಕಲಬುರ್ಗಿ: ಕೊರೊನಾ ಜಾಗೃತಿ ಅಭಿಯಾನಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಗುಲಬರ್ಗಾ ವಿಶ್ವವಿದ್ಯಾಲಯದ ರಾಷ್ಟ್ರೀಯ ಸ್ವಯಂ ಸೇವಾ ಘಟಕದ (ಎನ್‌ಎಸ್‌ಎಸ್‌)ದ ವತಿಯಿಂದ ಹಮ್ಮಿಕೊಳ್ಳಲಾದ ಕೊರೊನಾ ಜಾಗೃತಿ ಅಭಿಯಾನಕ್ಕೆ ಕುಲಪತಿ ಪ್ರೊ. ದಯಾನಂದ ಅಗಸರ ಸೋಮವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಕೋವಿಡ್–19 ಸೋಂಕು ವಿಶ್ವದಾದ್ಯಂತ ಹರಡಿ ಲಕ್ಷಾಂತರ ಜನರು ಜೀವ ಕಳೆದುಕೊಳ್ಳುತಿದ್ದಾರೆ. ಇದಕ್ಕೆ ಕಾರಣ ರೋಗ ಹರಡುವಿಕೆಯ ಬಗ್ಗೆ ಮತ್ತು ವಿಶ್ವಸಂಸ್ಥೆ ವಿಧಿಸಿರುವ ನಿಯಮಗಳನ್ನು ಪಾಲಿಸದೇ ಇರುವದು. ರೋಗವು ಅತ್ಯಂತ ವ್ಯಾಪಕವಾಗಿ ಹರಡುತ್ತಿರುವುದರಿಂದ ಕರ್ನಾಟಕ ಸರ್ಕಾರದ ಆದೇಶದಂತೆ ಗುಲಬರ್ಗಾ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್‌ ಕೋಶವು ಕಲಬುರ್ಗಿ ನಗರ ಹಾಗೂ ಸುತ್ತಮುತ್ತಲಿನ ಹಳ್ಳಿಗಳಿಗೆ ವಾಹನದ ಮುಖಾಂತರ ತೆರಳಿ ವೈರಸ್ ಸೋಂಕು ತಡೆಯಲು ಮಾಸ್ಕ್,ಕೈ ತೊಳೆಯುವುದು ಹಾಗೂ ದೈಹಿಕ ಅಂತರವನ್ನು ಪಾಲನೆ ಮಾಡುವ ಕ್ರಮಗಳ ಕುರಿತು ಜನರಲ್ಲಿ ಧ್ವನಿವರ್ಧಕ ಮೂಲಕ ಜಾಗೃತಿ ಮೂಡಿಸಲಾಗುತ್ತದೆ’ ಎಂದರು.

ಕೋವಿಡ್–19 ನಿಯಮಗಳನ್ನು ವಿಶ್ವವಿದ್ಯಾಲಯದ ಆವರಣದಲ್ಲಿ ಕಡ್ಡಾಯವಾಗಿ ಪಾಲಿಸಬೇಕು ಎಂದರಲ್ಲದೇ,  ವಿಶ್ವವಿದ್ಯಾಲಯದ ಸಿಬ್ಬಂದಿಗೆ ಹಾಗೂ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದು ತಿಳಿಸಿದರು.

ಕುಲಸಚಿವ ಶರಣಬಸಪ್ಪ ಕೋಟೆಪ್ಪಗೋಳ, ವಿತ್ತಾಧಿಕಾರಿ ಪ್ರೊ. ಬಿ. ವಿಜಯ, ಎನ್‌ಎಸ್‌ಎಸ್‌ ಸಂಯೋಜಕ ಪ್ರೊ. ರಮೇಶ ಲಂಡನಕರ್ ಹಾಗೂ ಸಿಬ್ಬಂದಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು