ಶನಿವಾರ, ಮೇ 15, 2021
29 °C

ಕೊರೊನಾ ಕರ್ಫ್ಯೂ: ರಾತ್ರಿ ನಿಷೇಧಾಜ್ಞೆ ಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಏರುಗತಿಯಲ್ಲಿರುವುದರಿಂದ ನಗರ ಪ್ರದೇಶದಲ್ಲಿ ಇದೇ ಏಪ್ರಿಲ್ 10ರಿಂದ 20ರವರೆಗೆ ಪ್ರತಿ ದಿನ ರಾತ್ರಿ 10ರಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಹೇರಲಾಗಿದ್ದು, ಪೊಲೀಸ್ ಆಯುಕ್ತ ಸತೀಶಕುಮಾರ್ ಎನ್. ಅವರು ಸೆಕ್ಷನ್ 144 ಅನ್ವಯ ನಗರ ಪ್ರದೇಶದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಈ ಸಂದರ್ಭದಲ್ಲಿ ಯಾವುದೇ ವಾಣಿಜ್ಯ ವಹಿವಾಟನ್ನು ನಡೆಸುವಂತಿಲ್ಲ. ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಯಾವುದೇ ಚಟುವಟಿಕೆಗಳನ್ನು ನಡೆಸಲು ಅನಮತಿ ಇಲ್ಲ.

ಆದರೆ, ವಿವಿಧ ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಳಿಗಾಗಿ ಸಂಚಾರಕ್ಕಾಗಿ ಅನುಮತಿಸಲಾಗಿದೆ. ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲ ಕಾರ್ಖಾನೆಗಳು, ಕಂಪನಿಗಳು, ಸಂಸ್ಥೆಗಳು ಯಥಾರೀತಿ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಸಂಬಂಧಿಸಿದ ಕಾರ್ಮಿಕರು, ನೌಕರರು ಕೊರೊನಾ ಕರ್ಫ್ಯೂ ಅವಧಿಗೆ ಮುನ್ನವೇ ಕರ್ತವ್ಯದಲ್ಲಿ ಹಾಜರಿರಬೇಕು ಎಂದು ತಿಳಿಸಿದ್ದಾರೆ.

ಅತ್ಯವಶ್ಯಕ ಸೇವೆಗಳನ್ನು ಒದಗಿಸುವಂತಹ ವಾಹನಗಳು, ಸರಕು ಸಾಗಾಣಿಕ ವಾಹನಗಳು ಮತ್ತು ಖಾಲಿ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿಸಿದೆ. ರಾತ್ರಿ ವೇಳೆಯಲ್ಲಿನ ಬಸ್ಸು, ರೈಲು ಹಾಗೂ ವಿಮಾನದ ದೂರ ಪ್ರಯಾಣಕ್ಕೆ ಅನುಮತಿಸಿದೆ. ಪ್ರಯಾಣಿಕರು ಮನೆಯಿಂದ ನಿಲ್ದಾಣಗಳಿಗೆ ಮತ್ತು ನಿಲ್ದಾಣಗಳಿಂದ ಮನೆಗೆ ಅಧಿಕೃತ ಟಿಕೆಟ್‌ಗಳ ಆಧಾರದ ಮೇಲೆ ಆಟೊ, ಕ್ಯಾಬ್ ಮೂಲಕ ಸಂಚರಿಸಲು ಅನುಮತಿ ನೀಡಲಾಗಿದೆ ಎಂದು ಸತೀಶಕುಮಾರ್‌ ಆದೇಶದಲ್ಲಿ ವಿವರಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು