ಶನಿವಾರ, ಮಾರ್ಚ್ 28, 2020
19 °C

ಕಲಬುರ್ಗಿ | ಮೃತ ವೃದ್ಧನ ಕುಟುಂಬ ಸದಸ್ಯರೊಬ್ಬರಿಗೆ ಕೊರೊನಾ ಸೋಂಕು ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಕಳೆದ ಮಾ 10ರಂದು ನಿಧನರಾದ ನಗರದ ವೃದ್ಧ ಮೊಹಮ್ಮದ್‌ ಹುಸೇನ್‌ ಸಿದ್ದಿಕಿ (76) ಅವರ ಕುಟುಂಬ ಸದಸ್ಯರೊಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಅವರ ಕುಟುಂಬದ ನಾಲ್ವರು ಸದಸ್ಯರ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಮೂವರಿಗೆ ಸೋಂಕು ಇಲ್ಲ ಎಂಬ ವರದಿ ಶನಿವಾರವೇ ಬಂದಿತ್ತು. ಭಾನುವಾರ ಮತ್ತೊಬ್ಬ ಸದಸ್ಯರ ವರದಿ ಬಂದಿದ್ದು, ಅವರಿಗೂ ಕೊರೊನಾ ಸೋಂಕು ತಗುಲಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ನಾಲ್ವರನ್ನೂ ಸದ್ಯ ಇಎಸ್‌ಐ ಆಸ್ಪತ್ರೆಯ ವಿಶೇಷ ವಾರ್ಡ್‌ನಲ್ಲಿ ಇರಿಸಲಾಗಿದೆ. ಅಲ್ಲದೇ, ಅವರೊಂದಿಗೆ ಒಡನಾಟ ಹೊಂದಿದ್ದ ಹಾಗೂ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ 67 ಜನರನ್ನು ಮನೆಯಲ್ಲೇ ಉಳಿಸಿ (ಐಸೋಲೇಶನ್‌) ನಿಗಾ ವಹಿಸಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ನಗರದ ಎಲ್ಲ ವಾಣಿಜ್ಯ ಮಳಿಗೆಗಳನ್ನು ಬಂದ್‌ ಮಾಡಲಾಗಿದೆ. ಹೆಚ್ಚು ಜನ ಸೇರುವ ಎಲ್ಲ ಜಾತ್ರೆ, ಉರುಸ್‌ಗಳನ್ನು ರದ್ದು ಮಾಡಲಾಗಿದ್ದು, ಸಾರ್ವಜನಿಕ ಉದ್ಯಾನಗಳನ್ನೂ ಬಂದ್‌ ಮಾಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು