ಕಲಬುರ್ಗಿ: ಕೊರೊನಾ ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಶನಿವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ. ಇದರಿಂದ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 362ಕ್ಕೆ ತಲುಪಿದೆ.

ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ನಗರದ ಆಳಂದ ಕಾಲೊನಿಯ 82 ವರ್ಷದ ವೃದ್ಧ ಏ.5ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ, ಏ.9ರಂದು ಮೃತಪಟ್ಟಿದ್ದಾರೆ.

ವಿಷಮಶೀತ ಜ್ವರದಿಂದ ಬಳಲುತ್ತಿದ್ದ ಅಫಜಲಪುರ ತಾಲ್ಲೂಕಿನ ಉಡಚಣ ಗ್ರಾಮದ 57 ವರ್ಷದ ಮಹಿಳೆ ಏ.5ರಂದು ತಮ್ಮ ಮನೆಯಲ್ಲಿಯೇ ನಿಧನ ಹೊಂದಿದ್ದಾರೆ.

276 ಮಂದಿಗೆ ಸೋಂಕು: ಜಿಲ್ಲೆಯಲ್ಲಿ ಹೊಸದಾಗಿ ಮತ್ತೆ 276 ಮಂದಿಗೆ ಕೊರೊನಾ ವೈರಾಣು ಅಂಟಿಕೊಂಡಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 25913ಕ್ಕೆ ಏರಿಕೆಯಾಗಿದೆ. ಜತೆಗೆ, 118 ಮಂದಿ ಸೋಂಕಿನಿಂದ ಮುಕ್ತರಾಗಿದ್ದು, ಗುಣಮುಖರಾದವರ ಸಂಖ್ಯೆ 23629ಕ್ಕೆ ಏರಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.