ಶನಿವಾರ, ಏಪ್ರಿಲ್ 4, 2020
19 °C

ಕಲಬುರ್ಗಿ: ವಾರ್ಡ್ ನಂಬರ್ 30ಕ್ಕೆ ಜಿಲ್ಲಾಧಿಕಾರಿಗಳ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ನಗರದ 76 ವರ್ಷದ ವಯೋವೃದ್ಧ  ಕೋರೋನಾ ವೈರಸ್ ನಿಂದ ನಿಧನ ಗೊಂಡಿರುವ ಹಿನ್ನೆಲೆಯಲ್ಲಿ ಸದರಿ ವ್ಯಕ್ತಿ ವಾಸಿಸುವ ವಾರ್ಡ್ ನಂಬರ್ 30ರ (ಕೆ.ಎನ್.ಜೆಡ್ ಫಂಕ್ಷನ್ ಹಾಲ್ ) ಪ್ರದೇಶಕ್ಕೆ ಜಿಲ್ಲಾಧಿಕಾರಿ ಶರತ್ ಬಿ. ಸೇರಿದಂತೆ ಹಿರಿಯ ಅಧಿಕಾರಿಗಳು ಶುಕ್ರವಾರ ಭೇಟಿ ನೀಡಿ ಸೊಂಕು ಹರಡುವಿಕೆಗೆ ತಡೆಗಟ್ಟಬಹುದಾದ ಕ್ರಮಗಳನ್ನು ಸ್ಥಳೀಯ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದರು.

ನಿಧನ ಹೊಂದಿದ ವ್ಯಕ್ತಿಯ ಮನೆಯಿರುವ ವಾರ್ಡ್ ಅನ್ನು ಅಡಳಿತ ಬ್ಲಾಕ್/ಕಂಟೇನ್ ಮೆಂಟ್ ಝೋನ್ ಎಂದು ಪರಿಗಣಿಸಿ ಇಲ್ಲಿಂದ‌ ಬೇರೆ ಪ್ರದೇಶಕ್ಕೆ ಸೊಂಕು ಹರಡದಂತೆ ಮುಂಜಾಗ್ರತವಾಗಿ ಸ್ಕ್ರೀನಿಂಗ್ ಮತ್ತು ಅರಿವು ಮೂಡಿಸುವ ಐ.ಇ.ಸಿ ಚಟುವಟಿಕೆಗಳು ತ್ವರಿತಗತಿಯಲ್ಲಿ ನಡೆಸಬೇಕು. ಇನ್ನು ಕಂಟೇನ್ ಮೆಂಟ್ ಝೋನ್ ಸುತ್ತಮುತ್ತ 5 ಕಿ.ಮೀ ಪ್ರದೇಶ ಬಫರ್ ಝೋನ್ ಎಂದು ಗುರುತಿಸಿ ಸೊಂಕಿನ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳು ನಡೆಯಬೇಕು ಎಂದು ಪಾಲಿಕೆ ಮತ್ತು ಆರೋಗ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಎಸ್.ಪಿ.ಯಡಾ‌ ಮಾರ್ಟಿನ್, ಡಿಸಿಪಿ ಕಿಶೋರ್ ಬಾಬು, ಜಿಲ್ಲಾ ಪಂಚಾಯತಿ ಸಿ.ಇ.ಓ.ಡಾ.ಪಿ‌.ರಾಜಾ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ ಸೇರಿದಂತೆ ಮಹಾನಗರ ಪಾಲಿಕೆ ಮತ್ತು ಆರೋಗ್ಯ ಇಲಾಖೆಯ ಸ್ಥಳೀಯ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು