ಗುರುವಾರ , ಅಕ್ಟೋಬರ್ 1, 2020
27 °C
ಜಿಲ್ಲಾ ನ್ಯಾಯಾಲಯ ಶೀಲ್‌ಡೌನ್ ‌8ರವರೆಗೆ ಮುಂದುವರಿಕೆ

ಕಲಬುರ್ಗಿ: ಎಲ್ಲ ಕಾರ್ಯಕಲಾಪಗಳು ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಕೋವಿಡ್‌ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ, ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ನ್ಯಾಯಾಲಯಗಳ ಕಾರ್ಯಕಲಾಪಗಳನ್ನು ಆ. 8ರವರೆಗೂ ಸ್ಥಗಿತಗೊಳಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಆರ್.ಜೆ. ಸತೀಶ್ ಸಿಂಗ್‌ ಅವರು ತಿಳಿಸಿದ್ದಾರೆ.

ಈ ಅವಧಿಯಲ್ಲಿ ಯಾವುದೇ ನ್ಯಾಯಾಂಗ ಮತ್ತು ಇತರೆ ನ್ಯಾಯಾಂಗ ಹಾಗೂ ಆಡಳಿತಾತ್ಮಕ ಕೆಲಸ ಕಾರ್ಯಗಳನ್ನು ರದ್ದುಪಡಿಸಲಾಗಿದೆ. ಅದೇ ರೀತಿ ನ್ಯಾಯಾಲಯದಿಂದ ಜುಲೈ 31ರಂದು ಹೊರಡಿಸಿದ ಅಧಿಸೂಚನೆಯನ್ನು ಸಹ ರದ್ದುಪಡಿಲಾಗಿದೆ. ಈ ಅವಧಿಯಲ್ಲಿ ಕೇವಲ ತುರ್ತು ಕಲಾಪಗಳ ಪ್ರಕರಣಗಳನ್ನು ಇ-ಮೇಲ್ ಮಾತ್ರ ಸ್ವೀಕರಿಸಲಾಗುವುದು ಹಾಗೂ ವಿಡಿಯೊ ಸಂದರ್ಶನಗಳ ಮೂಲಕ ಆಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕೋವಿಡ್‌ ಹಿನ್ನೆಲೆಯಲ್ಲಿ ಆ. 3ರಿಂದ 5 ರವರೆಗೆ ಎಲ್ಲ ನ್ಯಾಯಾಲಯಗಳ ಕಾರ್ಯಕಲಾಪಗಳನ್ನು ರದ್ದು ಮಾಡಲಾಗಿತ್ತು. ಈಗ ಅದನ್ನು ಆ. 8ರವರೆಗೂ ಮುಂದುವರಿಸಲಾಗಿದೆ.

ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಮಾಡುವ ನಾಲ್ವರು ಸಿಬ್ಬಂದಿಗೂ ಕೋವಿಡ್‌ ಅಂಟಿಕೊಂಡ ಕಾರಣ, ನ್ಯಾಯಾಲಯದ ಶೀಲ್‌ಡೌನ್‌ ಮುಂದುವರಿಸಲಾಗಿದೆ.‌

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು