ವಿಷ ಸೇವಿಸಿ ದಂಪತಿ ಆತ್ಮಹತ್ಯೆ

7

ವಿಷ ಸೇವಿಸಿ ದಂಪತಿ ಆತ್ಮಹತ್ಯೆ

Published:
Updated:

ಕಲಬುರ್ಗಿ: ಚಿತ್ತಾಪುರ ತಾಲ್ಲೂಕು ಕೊಲ್ಲೂರ ಗ್ರಾಮದ ಹೊಲದಲ್ಲಿ ದಂಪತಿ ಶುಕ್ರವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪತಿ ಶಿವಯ್ಯ ಭದ್ರಯ್ಯ ಸ್ವಾಮಿ (30), ಪತ್ನಿ ಮಮತಾ ಶಿವಯ್ಯ (25) ಆತ್ಮಹತ್ಯೆ ಮಾಡಿಕೊಂಡವರು. ಶಿವಯ್ಯ ಅವರು ಕಲಬುರ್ಗಿ ನಗರದಲ್ಲಿ ಫೋಟೊ ಸ್ಟುಡಿಯೋ ಹೊಂದಿದ್ದಾರೆ. ಇವರು ಕಳೆದ ಅಕ್ಟೋಬರ್‌ನಲ್ಲಿ ಮದುವೆಯಾಗಿದ್ದರು.

‘ಶುಕ್ರವಾರ ಮಧ್ಯಾಹ್ನ ದಂಪತಿ ಹೊಲಕ್ಕೆ ಹೋಗಿ ವಿಷ ಸೇವಿಸಿದ್ದಾರೆ. ಸಂಜೆಯಾದರೂ ಮನೆಗೆ ಬಾರದ್ದರಿಂದ ಆತಂಕಗೊಂಡ ಕುಟುಂಬದ ಸದಸ್ಯರು ಹೊಲಕ್ಕೆ ಹೋಗಿ ನೋಡಿದಾಗ ವಿಷ ಸೇವಿಸಿರುವುದು ಗೊತ್ತಾಗಿದೆ. ಶಿವಯ್ಯ ಸ್ಥಳದಲ್ಲೇ ಮೃತಪಟ್ಟಿದ್ದು, ಮಮತಾ ಸಾವು–ಬದುಕಿನ ಮಧ್ಯೆ ಹೋರಾಡುತ್ತಿದ್ದರು. ತಕ್ಷಣ ಆಂಬುಲೆನ್ಸ್ ಮೂಲಕ ಅವರನ್ನು ಕಲಬುರ್ಗಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗಮಧ್ಯೆಯೇ ಮಮತಾ ಮೃತಪಟ್ಟಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಕೌಟುಂಬಿಕ ಕಲಹ ಹಾಗೂ ಹಣಕಾಸು ತೊಂದರೆಯಿಂದ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದರೆ’ ಎಂಬುದು ಮೂಲಗಳ ವಿವರಣೆ.
ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !