ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪೊಲೀಸರ ಮೇಲೆ ಹಲ್ಲೆ: ಮಾರ್ಕೆಟ್ ಸತ್ಯಾ ಸೇರಿ ಇಬ್ಬರಿಗೆ ಜೈಲು

Published 16 ಜನವರಿ 2024, 14:24 IST
Last Updated 16 ಜನವರಿ 2024, 14:24 IST
ಅಕ್ಷರ ಗಾತ್ರ

ಕಲಬುರಗಿ: ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಕುಖ್ಯಾತ ರೌಡಿ ಸತೀಶಕುಮಾರ್ ವೆಂಕಟರಡ್ಡಿ ಅಲಿಯಾಸ್ ಮಾರ್ಕೆಟ್ ಸತ್ಯಾ (36) ಹಾಗೂ ಅಫಜಲಪುರ ತಾಲ್ಲೂಕಿನ ಬಳೂರ್ಗಿ ಗ್ರಾಮದ ಅಪ್ಪುಶಾ ಅಲಿಯಾಸ್ ಬಂಡಯ್ಯಾ ಸಾತಲಿಂಗಯ್ಯ ಮಠಪತಿ (30) ಎಂಬುವವರಿಗೆ ಇಲ್ಲಿನ ಮೂರನೇ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯ ತಲಾ ಎರಡು ವರ್ಷ ಜೈಲು ಹಾಗೂ ₹ 10 ಸಾವಿರ ದಂಡ ವಿಧಿಸಿದೆ.

2016ರ ಮೇ 4ರಂದು ಲಾಕಪ್‌ ಗಾರ್ಡ್ ಕರ್ತವ್ಯದಲ್ಲಿದ್ದ ಪೊಲೀಸರತ್ತ ಅವಾಚ್ಯ ಬೈಗುಳಗಳಿಂದ ನಿಂದಿಸಲು ಶುರು ಮಾಡಿ ನಂತರ ಹೆಡ್‌ ಕಾನ್‌ಸ್ಟೆಬಲ್‌ಗೆ ಕುತ್ತಿಗೆ ಹಿಸುಕಿ ಕೊಲೆ ಮಾಡಲು ಪ್ರಯತ್ನಿಸಿದ್ದರು. ತಪ್ಪಿಸಿಕೊಂಡು ಓಡಿಹೋಗುವಾಗ ಪೊಲೀಸ್ ಠಾಣೆಯ ಬಾಗಿಲು ಬಡಿದಿದ್ದರಿಂದ ಆರೋಪಿಗಳನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಈ ಕುರಿತು ಸ್ಟೇಶನ್ ಬಜಾರ್ ಠಾಣೆಯ ಪೊಲೀಸರು ಆರೋಪಿಗಳ ವಿರುದ್ಧ ದೂರು ನೀಡಿದ್ದರು.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ರಾಜಶೇಖರ ಹಳಿಗೋದಿ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಚಂದ್ರಶೇಖರ ಕರೋಶಿ ಅವರು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದರು.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಗುರುಲಿಂಗಪ್ಪ ತೇಲಿ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT