ಶುಕ್ರವಾರ, ಏಪ್ರಿಲ್ 16, 2021
25 °C
ಶಹಾಬಾದ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಮೇಲೆ ದೌರ್ಜನ್ಯವೆಸಗಿದ ಪ್ರಕರಣ

ಅತ್ಯಾಚಾರ: ಅಪರಾಧಿಗೆ 7 ಕಠಿಣ ಶಿಕ್ಷೆ, ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಪರಿಶಿಷ್ಟ ಜಾತಿಗೆ ಸೇರಿದ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಪರಾಧ ಸಾಬೀತಾಗಿದ್ದರಿಂದ ಶಹಾಬಾದ್‌ನ ಹೀರಾಲಾಲ್‌ ಲಕ್ಷ್ಮಣ ಬೋಯಿ (32) ಎಂಬಾತನಿಗೆ ಇಲ್ಲಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಗೋಪಾಲಪ್ಪ ಎಸ್‌. ಅವರು 7 ವರ್ಷ ಕಠಿಣ ಶಿಕ್ಷೆ ಹಾಗೂ ₹ 50 ಸಾವಿರ ದಂಡ ವಿಧಿಸಿದ್ದಾರೆ.

ಅಲ್ಲದೇ, ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ₹ 75 ಸಾವಿರ ಪರಿಹಾರ ನೀಡಬೇಕು ಎಂದೂ ಆದೇಶಿಸಿದ್ದಾರೆ.

ಪ್ರಕರಣದ ವಿವರ: ಶಹಾಬಾದ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ರಾಮಘಡ ಹತ್ತಿರದ ಆಶ್ರಯ ಕಾಲೊನಿ ಬಳಿ 28 ಡಿಸೆಂಬರ್‌ 2017ರಂದು ಬಾಲಕಿ ಐಸ್‌ಕ್ರೀಮ್‌ ತರಲು ಹೋಗುತ್ತಿದ್ದಾಗ ಹಿಂದಿನಿಂದ ಸೈಕಲ್‌ನಲ್ಲಿ ಬಂದ ಹೀರಾಲಾಲ್‌ ಪಕ್ಕಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಈ ಕುರಿತು ಪೋಕ್ಸೊ (ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳನ್ನು ರಕ್ಷಿಸುವ ಕಾಯ್ದೆ–2012) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಡಿವೈಎಸ್ಪಿ ಕೆ.ಬಸವರಾಜ ಅವರು ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ವಾದ–ವಿವಾದಗಳನ್ನು ಆಲಿಸಿದ ನ್ಯಾಯಾಧೀಶರು ಅಪರಾಧ ಸಾಬೀತಾಗಿದೆ ಎಂದು ಪರಿಗಣಿಸಿ ಶಿಕ್ಷೆಯನ್ನು ಪ್ರಕಟಿಸಿದರು.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಅಂಜನಾ ಚವ್ಹಾಣ ವಾದ ಮಂಡಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.