ಶನಿವಾರ, ಜೂನ್ 12, 2021
23 °C

ಲಾಕ್‌ಡೌನ್‌: ಕಲಬುರ್ಗಿಯಲ್ಲಿ ಮುಂದುವರಿದ ವಾಹನ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: 14 ದಿನಗಳ‌ ಕಠಿಣ ‌ಲಾಕ್‌ಡೌನ್‌ನ ಎರಡನೇ ದಿನವಾದ ಮಂಗಳವಾರವೂ ಸಕಾರಣವಿಲ್ಲದೇ ರಸ್ತೆಗಿಳಿದ ವಾಹನಗಳನ್ನು ಜಪ್ತಿ ‌ಮಾಡಲಾಗುತ್ತಿದೆ.

ಸೋಮವಾರ ಪೊಲೀಸರು 399 ವಾಹನಗಳನ್ನು ಜಪ್ತಿ ಮಾಡಿದ್ದರಿಂದ ಹೆಚ್ಚಿನ ‌ಸಂಖ್ಯೆಯಲ್ಲಿ ಜನರು ರಸ್ತೆಗಿಳಿಯಲು ಹಿಂಜರಿಯುತ್ತಿದ್ದಾರೆ.

ಬಸ್, ಆಟೊ ಸಂಚಾರ ಇಲ್ಲದ್ದರಿಂದ ಹಾಗೂ ಬೆಳಿಗ್ಗೆ 10 ಗಂಟೆಯ ಬಳಿಕ ಖಾಸಗಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಇರುವುದರಿಂದ ರೈಲಿನ ಮೂಲಕ ನಗರಕ್ಕೆ ಬಂದ ಪ್ರಯಾಣಿಕರು ನಡೆದುಕೊಂಡೇ ಹೋಗುತ್ತಿದ್ದಾರೆ.

ನಗರದ ವಿವಿಧ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 45 ವರ್ಷದವರ ಜೊತೆಗೆ 18ರಿಂದ 44 ವರ್ಷದವರಿಗೂ ಲಸಿಕೆ ಹಾಕಲಾಗುತ್ತಿದೆ. ಆದರೆ, ಕೋವಿನ್ ಆ್ಯಪ್ ನಲ್ಲಿ ನೋಂದಣಿ ‌ಮಾಡಿಸಿದವರಿಗಷ್ಟೇ ಲಸಿಕೆ ಹಾಕುವುದಾಗಿ ಜಿಲ್ಲಾಡಳಿತ ತಿಳಿಸಿದ್ದರಿಂದ ಲಸಿಕಾ ಕೇಂದ್ರಗಳ ಬಳಿ ಹೆಚ್ಚಿನ ಜನದಟ್ಟಣಿ ಕಂಡು ಬರುತ್ತಿಲ್ಲ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು