ಶನಿವಾರ, ಜುಲೈ 31, 2021
21 °C

ಒಂದು ಸಾವಿರ ಕೋವಿಡ್-19 ಪ್ರಕರಣಗಳತ್ತ ಕಲಬುರ್ಗಿ ಜಿಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಕಲಬುರ್ಗಿ: ಜಿಲ್ಲೆಯಲ್ಲಿ ಮಂಗಳವಾರ 60 ಕೋವಿಡ್-19 ಪ್ರಕರಣ ವರದಿಯಾಗಲಿದ್ದು, ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ ಒಂದು ಸಾವಿರ ದಾಟಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ರಾಜಾ ಪಿ. ತಿಳಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ‌ಸಭಾಂಗಣದಲ್ಲಿ ನಡೆದ 18ನೇ ಸಾಮಾನ್ಯ ‌ಸಭೆಯಲ್ಲಿ ಮಾತನಾಡಿದ ಅವರು, ಸೋಮವಾರ ಸಂಜೆಯ ವೇಳೆಗೆ 944 ಪ್ರಕರಣಗಳು ಪತ್ತೆಯಾಗಿದ್ದವು. ಮಂಗಳವಾರ  60 ಪ್ರಕರಣಗಳು ಪತ್ತೆಯಾಗಿವೆ. ಒಟ್ಟಾರೆ ಪ್ರಕರಣಗಳ ಪೈಕಿ 800 ಜನ ಬೇರೆ ರಾಜ್ಯಗಳಿಂದ ಬಂದವರಲ್ಲಿ ಕಾಣಿಸಿಕೊಂಡಿವೆ ಎಂದರು.

ಜಿಮ್ಸ್ ಆಸ್ಪತ್ರೆಯಲ್ಲಿ 35 ವೆಂಟಿಲೇಟರ್‌ಗಳಿವೆ. ಜಿಮ್ಸ್‌ನಲ್ಲಿ 56, ಇಎಸ್ಐಸಿ ಆಸ್ಪತ್ರೆಯಲ್ಲಿ 35 ಐಸಿಯುಗಳಿವೆ. ಜಿಮ್ಸ್‌ನಲ್ಲಿ 379, ಇಎಸ್ಐಸಿನಲ್ಲಿ 320 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಕಾಯ್ದಿರಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಕೋವಿಡ್ ಪ್ರಯೋಗಾಲಯದಲ್ಲಿ ನಿತ್ಯ 1 ಸಾವಿರ ‌ಮಾದರಿಗಳ ತಪಾಸಣೆ ‌ನಡೆಸಬಹುದಾಗಿದೆ. ಇನ್ನೂ 10 ದಿನಗಳವರೆಗೆ ಸಾಕಾಗುವಷ್ಟು ಟೆಸ್ಟಿಂಗ್ ಕಿಟ್ ಗಳನ್ನು ದಾಸ್ತಾನು ‌ಇಟ್ಟುಕೊಳ್ಳಲಾಗಿದೆ ಎಂದರು.

ಜಿ.ಪಂ. ಅಧ್ಯಕ್ಷೆ ಸುವರ್ಣಾ ಮಾಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ ಇದ್ದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು