ಸೋಮವಾರ, ಜೂನ್ 21, 2021
29 °C

ಕೋವಿಡ್‌ ಲಸಿಕೆ ಪಡೆದ ಜಿಡಗಾ ಶ್ರೀ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆಳಂದ: ತಾಲ್ಲೂಕಿನ ಜಿಡಗಾ ಮಠದ ಪೀಠಾಧಿಪತಿ ಮುರುಘರಾಜೇಂದ್ರ ಸ್ವಾಮೀಜಿ ಅವರು ಶನಿವಾರ ಜಿಡಗಾದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಾಕ್ಸಿನ್‌ ಲಸಿಕೆ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಜಿ, ಕೋವಿಡ್‌ ಲಸಿಕೆಯನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಇದರಿಂದ ರೋಗ ಪ್ರತಿರೋಧಕಶಕ್ತಿ ಹೆಚ್ಚಲಿದೆ. ನಮ್ಮಲ್ಲಿ ಆತ್ಮಸ್ಥೈರ್ಯ ಮೂಡಲಿದೆ. ಸಾರ್ವಜನಿಕರು ಸಹ ಇಂತಹ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಜಾರಿಗೆಗೊಳಿಸಿದ ಲಾಕ್‌ಡೌನ್‌ ನಿಯಮ ಪಾಲಿಸಬೇಕು ಹಾಗೂ ಆರೋಗ್ಯ ಇಲಾಖೆಯು ಸೂಚಿಸಿದ ಅಗತ್ಯ ಕೋವಿಡ್‌ ಸುರಕ್ಷತಾ ಕ್ರಮಗಳು ಕಟ್ಟುನಿಟ್ಟಾಗಿ ಪಾಲಿಸಲು ಕರೆ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.