ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್-19: ವಿವಿಧ ತಾಲ್ಲೂಕು ಆಸ್ಪತ್ರೆಗಳಿಗೆ ಸಚಿವ ಮುರುಗೇಶ ನಿರಾಣಿ ಭೇಟಿ

Last Updated 17 ಮೇ 2021, 9:28 IST
ಅಕ್ಷರ ಗಾತ್ರ

ಕಲಬುರ್ಗಿ: ಕೋವಿಡ್‌ ಸೋಂಕು ಹೆಚ್ಚುತ್ತಿರುವ ಪ್ರಯುಕ್ತ ಜಿಲ್ಲೆಯ ವಿವಿಧ ತಾಲ್ಲೂಕು ಆಸ್ಪತ್ರೆಗಳಲ್ಲಿನ ಮೂಲಸೌಕರ್ಯಗಳನ್ನು ಪರಿಶೀಲಿಸಲು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ಸೋಮವಾರ ಚಿತ್ತಾಪುರ, ಶಹಾಬಾದ್‌ ಆಸ್ಪತ್ರೆಗಳಿಗೆ ಭೇಟಿ ನೀಡಿದರು.

ಬೆಂಗಳೂರಿನಿಂದ ವಿಮಾನದ ಮೂಲಕ ನಗರಕ್ಕೆ ಬಂದಿಳಿದ ಸಚಿವ ನಿರಾಣಿ ಅಲ್ಲಿಂದ ನೇರವಾಗಿ ಚಿತ್ತಾಪುರ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿದರು. ನಂತರ ಸಂಸದ, ಶಾಸಕರು ಹಾಗೂ ಇತರ ಜನಪ್ರತಿನಿಧಿಗಳ ಸಭೆ ನಡೆಸಿದರು. ಅಲ್ಲಿಂದ ಶಹಾಬಾದ್‌ಗೆ ತೆರಳಿ ಪಾಳುಬಿದ್ದಿದ್ದ ಇಎಸ್‌ಐ ಆಸ್ಪತ್ರೆಯನ್ನು ಕೋವಿಡ್‌ ಕೇರ್‌ ಕೇಂದ್ರವಾಗಿಸಲು ನಡೆಯುತ್ತಿರುವ ಕಾಮಗಾರಿಯನ್ನು ವೀಕ್ಷಿಸಿದರು. ಅಲ್ಲಿಯೂ ಶಾಸಕರು, ತಹಶೀಲ್ದಾರ್‌ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಸಂಸದ‌ ಡಾ.ಉಮೇಶ‌ ಜಾಧವ, ಶಾಸಕ‌ರಾದ ಪ್ರಿಯಾಂಕ್ ಖರ್ಗೆ, ಬಸವರಾಜ ಮತ್ತಿಮೂಡ, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ. ಪಾಟೀಲ, ಶಶೀಲ ಜಿ.ನಮೋಶಿ, ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದಿಲೀಷ್ ಶಶಿ, ಸಹಾಯಕ ಆಯುಕ್ತ ರಮೇಶ ಕೋಲಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶರಣಬಸಪ್ಪ ಗಣಜಲಖೇಡ, ತಹಶೀಲ್ದಾರ್‌ಗಳಾದ ಉಮಾಕಾಂತ‌ ಹಳ್ಳೆ, ಸುರೇಶ ವರ್ಮಾ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ದೀಪಕ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT