ಕಲಬುರ್ಗಿ: ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್ ಹಬ್ಬುತ್ತಿರುವ ಮಧ್ಯೆಯೇ ಇತರೆ ಕಾಯಿಲೆಯಿಂದ ಬಳಲುತ್ತಿರುವವರೂ ಚಿಕಿತ್ಸೆಗಾಗಿ ಪರದಾಡುವಂತಾಗಿದ್ದು, ಭಾನುವಾರ ಮಹಿಳೆಯೊಬ್ಬರು ಬೆಡ್ ಸಿಗದ ಕಾರಣಕ್ಕೆ ಆಟೊದಲ್ಲಿ ಆಕ್ಸಿಜನ್ ಸಿಲಿಂಡರ್ನೊಂದಿಗೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದಾರೆ.

ಇಲ್ಲಿನ ಬಸವ ನಗರದ 55 ವರ್ಷದ ಮಹಿಳೆ ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಬೆಳಿಗ್ಗೆ ಅಸ್ವಸ್ಥಗೊಂಡಿದ್ದರು. ಹೀಗಾಗಿ ಖಾಸಗಿ ಆಸ್ಪತ್ರೆಯೊಂದಕ್ಕೆ ಕುಟುಂಬದವರು ಕರೆದುಕೊಂಡು ಹೋಗಿದ್ದರು. ಆಗ ಐಸಿಯು ಬೆಡ್ ಖಾಲಿ ಇಲ್ಲ ಎಂದು ಹೇಳಿ ಆಸ್ಪತ್ರೆಯವರು ಆಕ್ಸಿಜನ್ ಸಿಲಿಂಡರ್ ಅಳವಡಿಸಿ ಕೃತಕ ಉಸಿರಾಟದ ವ್ಯವಸ್ಥೆ ಮಾಡಿದ್ದರು.

ನಂತರ ಐಸಿಯು ಬೆಡ್ಗಾಗಿ ಆಕ್ಸಿಜನ್ ಸಿಲಿಂಡರ್ನೊಂದಿಗೆ ಆಟೊದಲ್ಲಿ ನಾಲ್ಕು ಖಾಸಗಿ ಆಸ್ಪತ್ರೆಗಳು ಹಾಗೂ ಕೇಂದ್ರ ಕಾರ್ಮಿಕ ಇಲಾಖೆಯ ಅಧೀನದ ಇಎಸ್ಐ ಆಸ್ಪತ್ರೆಗಳಿಗೆ ಅಲೆದು ಜಿಮ್ಸ್ ಆಸ್ಪತ್ರೆಗೆ ಬಂದಿದ್ದರು. ಆದರೆ, ಇಲ್ಲೂ ಬೆಡ್ಗಳು ಖಾಲಿ ಇನ್ನುವ ಕಾರಣಕ್ಕೆ ಮೂರು ಗಂಟೆ ಕಾಲ ಆಸ್ಪತ್ರೆಯ ಮುಂದೆಯೇ ಪರದಾಡಿದರು ಎಂದು ಕುಟುಂಬದವರು ತಿಳಿಸಿದ್ದಾರೆ.

ಮಧ್ಯಾಹ್ನದ ವೇಳೆಗೆ ಜಿಮ್ಸ್ ಆಸ್ಪತ್ರೆಯವರೇ ಐಸಿಯು ಘಟಕದಲ್ಲಿ ಮತ್ತೊಂದು ಬೆಡ್ ವ್ಯವಸ್ಥೆ ಮಾಡಿ ಒಂದೇ ಯಂತ್ರಕ್ಕೆ ಎರಡು ‘ಫ್ಲೋ ಮೀಟರ್’ ಅಳವಡಿಸಿ ಚಿಕಿತ್ಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.