ಬುಧವಾರ, ಜೂನ್ 23, 2021
24 °C
247 ಜನ ಗುಣಮುಖ; ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಇಳಿಮುಖ

ಕಲಬುರ್ಗಿ: ಕೋವಿಡ್‌ ಸೋಂಕಿನಿಂದ ಮತ್ತೆ ಮೂವರು ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಕೋವಿಡ್‌–19 ಸೋಂಕಿನಿಂದ ನಗರದ ಮೂವರು ನಿಧನವಾಗಿರುವ ಬಗ್ಗೆ ಬುಧವಾರ ವರದಿಯಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 175ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.

ತೀವ್ರ ಉಸಿರಾಟ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡ ಹಾಗೂ ನ್ಯುಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ರಾಮನಗರದ 73 ವರ್ಷದ ವೃದ್ಧ ಆ 14ರಂದು ಆಸ್ಪತ್ರೆಗೆ ದಾಖಲಾಗಿ ಆ 18ರಂದು ಮೃತಪಟ್ಟಿದ್ದಾರೆ. ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ ಹಾಗೂ ನ್ಯುಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಕಲಬುರ್ಗಿ ತಾಲ್ಲೂಕಿನ ಶರಣಸಿರಸಗಿಯ 65 ವರ್ಷದ ವೃದ್ಧ ಆ 14ರಂದು ಆಸ್ಪತ್ರೆಗೆ ದಾಖಲಾಗಿ ಆ 17ರಂದು ನಿಧನರಾಗಿದ್ದಾರೆ. ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ ಹಾಗೂ ನ್ಯುಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ನಗರದ ಆಳಂದ‌ ಚೆಕ್ ಪೋಸ್ಟ್ ಹತ್ತಿರದ 55 ವರ್ಷದ ಪುರುಷ ಆ 15ರಂದು ಆಸ್ಪತ್ರೆಗೆ ದಾಖಲಾಗಿ ಆ 17 ರಂದು ನಿಧನ ಹೊಂದಿದ್ದಾರೆ ಎಂದು ತಿಳಿಸಿದರು.

154 ಹೊಸ ಪ್ರಕರಣ: ಜಿಲ್ಲೆಯಲ್ಲಿ ಬುಧವಾರ ಮತ್ತೆ 154 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9419ಕ್ಕೆ ಏರಿಕೆಯಾಗಿದೆ. 247 ಜನ ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟಾರೆ ಸೋಂಕು ಗೆದ್ದವರ ಸಂಖ್ಯೆ 7378ಕ್ಕೆ ಏರಿಕೆಯಾಗಿದೆ. 1866 ಸಕ್ರಿಯ ಪ್ರಕರಣಗಳಿವೆ. ಒಂದು ಹಂತದಲ್ಲಿ 2500ರಷ್ಟಿದ್ದು ಸಕ್ರಿಯ ಪ್ರಕರಣಗಳು ಕಡಿಮೆಯಾಗುತ್ತಿರುವುದು ಜಿಲ್ಲಾಡಳಿತಕ್ಕೆ ಸಮಾಧಾನ ಮೂಡಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು