ಮಂಗಳವಾರ, ಜನವರಿ 18, 2022
15 °C

ಕಲಬುರಗಿ: ಬಸ್ ನಿಲ್ದಾಣ, ರಸ್ತೆಗಳು ಖಾಲಿಖಾಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಹಾಬಾದ್: ವಾರಾಂತ್ಯ ಕರ್ಫ್ಯೂ ಹಿನ್ನಲೆ ಪಟ್ಟಣದಲ್ಲಿ ಪೊಲೀಸ್‌ ಇಲಾಖೆ ಕಠಿಣ ನಿರ್ಬಂಧ ಹೇರಿದ್ದರಿಂದ ಶನಿವಾರ ಜನಸಂಚಾರ ವಿರಳವಾಗಿತ್ತು.

ಶುಕ್ರವಾರ ರಾತ್ರಿ 8 ಗಂಟೆಯಿಂದಲೇ ಅಗತ್ಯ ವಸ್ತುಗಳನ್ನು ಬಿಟ್ಟು ಎಲ್ಲಾ ಅಂಗಡಿಗಳನ್ನು ಸಂಪೂರ್ಣವಾಗಿ ಮುಚ್ಚಿಸಲಾಗಿತ್ತು. ನಗರಕ್ಕೆ ಬರುವ ಹಾಗೂ ಬೇರೆ ಊರಿಗೆ ಹೋಗುವ ಜನರ ಸಂಖ್ಯೆ ಕಡಿಮೆಯಾಗಿತ್ತು. ನಗರದ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿದ್ದವು.

ಲಾಡ್ಜ್, ಬಾರ್, ರೆಸ್ಟೋರೆಂಟ ಮುಚ್ಚಿದ್ದರಿಂದ ವ್ಯಾಪಾರ ವಹಿವಾಟಿಗೆ ತೊಂದರೆಯಾಗಿದೆ ಎಂದು ವ್ಯಾಪಾರಸ್ಥರು ಅಸಮಾಧಾನ ಹೊರಹಾಕಿದರು.

ಕೆಲವು ಕಲ್ಯಾಣ ಮಂಟಪದಲ್ಲಿ ಮದುವೆಗಳು ನಡೆದಿದ್ದು ಬಿಟ್ಟರೇ, ಸಂಪೂರ್ಣ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು. ಸಂಜೆಯಾದಂತೆ ಒಬ್ಬೊಬ್ಬರು ಹೊರಗಡೆ ಬರುವುದು ಕಂಡು ಬಂದಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.