ಬುಧವಾರ, ಆಗಸ್ಟ್ 17, 2022
25 °C

ಕೋವಿಡ್: ಇಬ್ಬರು ವೃದ್ಧರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಕೋವಿಡ್–19 ಸೋಂಕಿನಿಂದ ಜಿಲ್ಲೆಯಲ್ಲಿ ಇಬ್ಬರು ವೃದ್ಧರು ನಿಧನರಾಗಿರುವ ಬಗ್ಗೆ ಗುರುವಾರ ವರದಿಯಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 235ಕ್ಕೆ ಏರಿಕೆಯಾಗಿದೆ.

ತೀವ್ರ ಉಸಿರಾಟ ತೊಂದರೆ ಮತ್ತು ಮಧುಮೇಹದಿಂದ ಬಳಲುತ್ತಿದ್ದ ಜೇವರ್ಗಿ ತಾಲ್ಲೂಕಿನ ಯಂಕಂಚಿ ಗ್ರಾಮದ 60 ವರ್ಷದ ವೃದ್ಧ ಸೆ 9ರಂದು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯಿಂದ ಕಲಬುರ್ಗಿ ತಾಲ್ಲೂಕಿನ ಬಸನಾಳ ಗ್ರಾಮದ 60 ವರ್ಷದ ವೃದ್ಧ ಸೆ 9ರಂದು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

243 ಪ್ರಕರಣ: ಗುರುವಾರ ಜಿಲ್ಲೆಯಲ್ಲಿ 243 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 13,734ಕ್ಕೆ ಏರಿಕೆಯಾಗಿದೆ. 234 ಜನ ಗುಣಮುಖರಾಗುವುದರೊಂದಿಗೆ ಒಟ್ಟಾರೆ 11,377 ಜನ ಸೋಂಕನ್ನು ಗೆದ್ದಂತಾಗಿದೆ. 2122 ಸಕ್ರಿಯ ಪ್ರಕರಣಗಳಿವೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು