ಸೋಮವಾರ, ಆಗಸ್ಟ್ 8, 2022
24 °C
ಅಧಿಕಾರಿಗಳ ಸಭೆ ನಡೆಸಿದ ಶಾಸಕ ಎಂ.ವೈ.ಪಾಟೀಲ

‘ಸೋಂಕಿತರು ಆರೈಕೆ ಕೇಂದ್ರ ಸೇರಿಕೊಳ್ಳಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಹೊನ್ನಕಿರಣಗಿ ಗ್ರಾಮದಲ್ಲಿ ಭಾನುವಾರ ಶಾಸಕ ಎಂ.ವೈ. ಪಾಟೀಲ ಅವರ ನೇತೃತ್ವದಲ್ಲಿ ಕೋವಿಡ್‌ ನಿಯಂತ್ರಣ ಸಭೆ ಹಾಗೂ ಲಸಿಕಾ ಅಭಿಯಾನ ನಡೆಯಿತು.

‘ಗ್ರಾಮದಲ್ಲಿ ಕನಿಷ್ಠ ಅಂತರ ಕಾಪಾಡಿಕೊಂಡೇ ವ್ಯವಹರಿಸಬೇಕು. ಸೋಂಕಿನ ಲಕ್ಷಣಗಳು ಕಂಡುಬಂದವರು ತಕ್ಷಣ ತಪಾಸಣೆಗೆ ಒಳಪಡಬೇಕು. ಸೋಂಕು ಖಚಿತವಾದವರು ಮನೆಯಲ್ಲಿ ಇರದೇ ಕೋವಿಡ್‌ ಆರೈಕೆ ಕೇಂದ್ರಗಳನ್ನು ಸೇರಿ ಆರೈಕೆ ಪಡೆಯಬೇಕು’ ಎಂದು ಶಾಸಕರು ತಿಳಿಸಿದರು.

‘ವೈದ್ಯಾಧಿಕಾರಿಗಳು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತರು, ಗ್ರಾಮ ಪಂಚಾಯಿತಿಯ ಸಿಬ್ಬಂದಿ ಸಾರ್ವಜನಿಕರ ಮೇಲೆ ನಿಗಾವಹಿಸಬೇಕು. ಗ್ರಾಮದಲ್ಲಿ ಅತಿಹೆಚ್ಚು ಪ್ರಕರಣಗಳು ಬಂದಿದ್ದು, ಸುತ್ತಲೂ ಸ್ಯಾನಿಟೈಸರ್‌ ಸಿಂಪಡಿಸಬೇಕು’ ಎಂದು ಸೂಚಿಸಿದರು.

ಹೊನ್ನ ಕಿರಣಗಿ ವಿರಕ್ತಮಠದ ಚಂದ್ರಚೂಡ ಶಿವಾಚಾರ್ಯ ಸಾನ್ನಿಧ್ಯ ವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ, ತಾಲ್ಲೂಕು ಆರೋಗ್ಯ ಅಧಿಕಾರಿ ಮಾರುತಿ ಕಾಂಬಳೆ, ಜಿಲ್ಲಾ ಪಂಚಾಯಿತಿ ಸದಸ್ಯ ದಿಲೀಪ್ ಆರ್. ಪಾಟೀಲ, ಪಿಡಿಒ ಮೇನಕಾ ಜಾಧವ, ಫರಹತಾಬಾದ್‌ ಪಿಎಸ್‌ಐ ತಿಮ್ಮಪ್ಪ,‌ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರವೀಣ ಬಿ. ಹೇರೂರ, ‌ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗೀತಾ ಕಿರಣಗಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಹೀರಾಬಾಯಿ ಲಕ್ಷ್ಮಣ ಭಜಂತ್ರಿ ಇದ್ದರು.

ಹೊನ್ನ ಕೀರಣಗಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಬಸವಲಿಂಗೇಶ್ವರ ದೇವಸ್ಥಾನದಲ್ಲಿ ಲಸಿಕಾ ಅಭಿಯಾನ ನಡೆಯಿತು.‌

ಆರೋಗ್ಯ ರಕ್ಷಿಸಿಕೊಳ್ಳುವ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಯಿತು.

200ಕ್ಕೂ ಹೆಚ್ಚು ಮಂದಿಗೆ ಲಸಿಕೆ ನೀಡಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು