ಬುಧವಾರ, ಜನವರಿ 19, 2022
24 °C

ದುಬೈನಿಂದ ಬಂದ ವ್ಯಕ್ತಿಗೆ ಕೋವಿಡ್‌;ಮಾದರಿ ರವಾನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ದುಬೈನಿಂದ ಕಲಬುರಗಿಗೆ ಬಂದ 34 ವರ್ಷದ ವ್ಯಕ್ತಿಯೊಬ್ಬರಲ್ಲಿ ಡಿ. 3ರಂದು ಕೋವಿಡ್‌ ದೃಢ
ಪಟ್ಟಿದ್ದು, ಜಿನೋಮ್‌ ಸಿಕ್ವೆನ್ಸಿಂಗ್‌ (ಓಮೈಕ್ರಾನ್‌) ಪರೀಕ್ಷೆಗಾಗಿ ಅವರ ಗಂಟಲು ದ್ರವ ಮಾದರಿಯನ್ನು ಸೋಮವಾರ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಕೆಲವು ವರ್ಷಗಳಿಂದ ದುಬೈನಲ್ಲಿದ್ದ ಈ ವ್ಯಕ್ತಿ ಅಲ್ಲಿಂದ ಹೈದರಾಬಾದ್‌ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಬಾಡಿಗೆ ವಾಹನದಲ್ಲಿ ಕಲಬುರಗಿಗೆ ಬಂದಿದ್ದ ಅವರ ಗಂಟಲು ದ್ರವ ಮಾದರಿಯನ್ನು ಇಲ್ಲಿನ ಯುನೈಟೆಡ್‌ ಆಸ್ಪತ್ರೆಯಲ್ಲಿರುವ ಪ್ರಯೋಗಾಲಯದಲ್ಲಿ ತಪಾಸಣೆ ಮಾಡಿದಾಗ ಕೋವಿಡ್‌ ಧೃಢಪಟ್ಟಿದೆ. ಅವರಲ್ಲಿ ಯಾವುದೇ ತರಹದ ರೋಗ ಲಕ್ಷಣಗಳು ಕಂಡುಬಂದಿಲ್ಲ. ಆದರೂ ಜಿಮ್ಸ್‌ ವೈದ್ಯರು ಚಿಕಿತ್ಸೆ ನೀಡಿ, ನಗರ ಪ‍್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿದ್ದಾರೆ.

‘ವಿದೇಶದಿಂದ ಬಂದ ಯಾವುದೇ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟರೆ ಅವರ ಮಾದರಿಯನ್ನು ಮರುಪರೀಕ್ಷೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಬೇಕು ಎಂಬ ನಿರ್ದೇಶನವಿದೆ. ಹೀಗಾಗಿ, ಈ ವ್ಯಕ್ತಿಯ ಗಂಟಲು ದ್ರವವನ್ನೂ ಕಳುಹಿಸಲಾಗಿದೆ. 2 ದಿನದಲ್ಲಿ ವರದಿ ಬರಲಿದೆ’ ಎಂದು ಜಿಮ್ಸ್‌ ನಿರ್ದೇಶಕಿ ಡಾ.ಕವಿತಾ ಪಾಟೀಲ ಹೇಳಿದರು.

‘ವಿವಿಧ ದೇಶಗಳಿಂದ ಒಂದು ತಿಂಗಳಲ್ಲಿ 25 ಮಂದಿ ಕಲಬುರಗಿ ನಗರಕ್ಕೆ ಬಂದಿದ್ದಾರೆ. ಅವರಿಗೆಲ್ಲ ಕೋವಿಡ್‌ ತಪಾಸಣೆ ಮಾಡಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದವರಿಗೆ ಹೋಂ ಕ್ವಾರಂಟೈನ್‌ ಮಾಡಲಾಗಿದೆ’‌ ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ‘‍ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು