ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಲಸಿಕೆ ಪ್ರಾಯೋಗಿಕ ಪರೀಕ್ಷೆ ಇಂದು

Last Updated 2 ಜನವರಿ 2021, 3:49 IST
ಅಕ್ಷರ ಗಾತ್ರ

ಕಲಬುರ್ಗಿ: ಕೋವಿಡ್‌ಗೆ ಲಸಿಕೆ ಬರುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಜನಸಾಮಾನ್ಯರ ಮೇಲೆ ಲಸಿಕೆ ಪ್ರಯೋಗ ಮಾಡುವ ಮುನ್ನ ಆರೋಗ್ಯ ಕಾರ್ಯಕರ್ತರ ಮೇಲೆ ಪ್ರಯೋಗ ಮಾಡಲು ಉದ್ದೇಶಿಸಿದ್ದು, ಇದಕ್ಕಾಗಿ ಇದೇ 2ರಂದು ಜಿಲ್ಲೆಯಾದ್ಯಂತ ಮೂರು ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ನೀಡುವ ವಿಧಾನದ ಕುರಿತು ‘ಡ್ರೈ ರನ್’ ನಡೆಸಲಾಗುತ್ತಿದೆ ಎಂದು ಜಿಲ್ಲಾ ಆರ್.ಸಿ.ಎಚ್.ಒ. ಅಧಿಕಾರಿ ಡಾ.ಪ್ರಭುಲಿಂಗ ಮಾನಕರ ತಿಳಿಸಿದ್ದಾರೆ.

ಪ್ರಥಮ ಹಂತದಲ್ಲಿ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವೈದ್ಯ ಮತ್ತು ವೈದ್ಯೇತರ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಲಸಿಕೆ ನೀಡಲು ಉದ್ದೇಶಿಸಿ ಇವರ ವಿವರವನ್ನು ಈಗಾಗಲೇ ಕೋವಿಡ್ ವೆಬ್ ಪೋರ್ಟಲ್‍ನಲ್ಲಿ ಅಪಲೋಡ್ ಮಾಡಲಾಗಿದೆ.

ಅಶೋಕ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಕಲಬುರ್ಗಿ ತಾಲ್ಲೂಕಿನ ಅವರಾದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಜೇವರ್ಗಿ ತಾಲ್ಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ಆರೋಗ್ಯ ಕಾರ್ಯಕರ್ತೆಯರಿಗೆ ಲಸಿಕೆ ನೀಡುವ ವಿಧಾನದ ಬಗ್ಗೆ ಪೂರ್ವಾಭ್ಯಾಸ ಮಾಡಲಾಗುತ್ತಿದೆ ಎಂದು ‌ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT