ಸೇಡಂ (ಕಲಬುರ್ಗಿ ಜಿಲ್ಲೆ): ಇಲ್ಲಿನ ತಾಲ್ಲೂಕು ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ನೀಡಲು ಶನಿವಾರ ಚಾಲನೆ ನೀಡಲಾಯಿತು.

ಆಸ್ಪತ್ರೆಯ ಗ್ರೂಪ್ ಡಿ ಸಿಬ್ಬಂದಿ ಸಂತೋಷ ಅವರಿಗೆ ಕೋವಿಡ್ ಮೊದಲ ಲಸಿಕೆ ನೀಡಲಾಯಿತು.

ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಮಾತನಾಡಿ, ಕೊರೊನಾ ಹಾವಳಿ ತಡೆಗಟ್ಟಲು ಲಸಿಕೆ ಸಿಗುತ್ತಿರುವುದು ನಮ್ಮೆಲ್ಲರ ಹೆಮ್ಮೆ. ಕೋವಿಡ್ ಬಂದರೂ ಹೆದರುವ ಅವಶ್ಯಕತೆ ಇಲ್ಲ. ಧೈರ್ಯದಿಂದ ಇದ್ದು ಎದುರಿಸಬೇಕು' ಎಂದರು.

ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಗೀತಾ ಶ್ರೀನಿವಾಸರೆಡ್ಡಿ ಪಾಟೀಲ, ವಿವೇಕರೆಡ್ಡಿ, ಶ್ರೀಮಂತ ಆವಂಟಿ, ವಿಜಯಕುಮಾರ್ ಶರ್ಮಾ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ಇದ್ದರು.

ಅಕ್ಷಯ್‌ಗೆ ಮೊದಲ ಲಸಿಕೆ
ಚಿತ್ತಾಪುರ (ಕಲಬುರ್ಗಿ ಜಿಲ್ಲೆ): ಇಲ್ಲಿನತಾಲ್ಲೂಕು ಆಸ್ಪತ್ರೆಯಲ್ಲಿ ಶನಿವಾರ ಅಕ್ಷಯ್ ಕುಮಾರ ಎನ್ನುವ ಡಿ ಗ್ರೂಪ್ ನೌಕರರಿಗೆ ಮೊದಲ ಲಸಿಕೆ ನೀಡಲಾಯಿತು.

ಶಾಸಕ ಪ್ರಿಯಾಂಕ್ ಖರ್ಗೆ ಅವರು ಲಸಿಕೆ ನೀಡುವ ವಿಧಾನವನ್ನು ಖುದ್ದು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ತಿಪ್ಪಣ್ಣಪ್ಪ ಕಮಕನೂರು, ತಾ.ಪಂ ಅಧ್ಯಕ್ಷ ಜಗನರೆಡ್ಡಿ ಪಾಟೀಲ, ತಹಶೀಲ್ದಾರ್ ಉಮಾಕಾಂತ್ ಹಳ್ಳೆ ಹಾಗೂ ವೈದ್ಯಾಧಿಕಾರಿಗಳು ಹಾಜಿರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.