ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕರ್ತವ್ಯ ಲೋಪ: ಸಿಪಿಐ ಅಮಾನತು

Published 22 ನವೆಂಬರ್ 2023, 16:02 IST
Last Updated 22 ನವೆಂಬರ್ 2023, 16:02 IST
ಅಕ್ಷರ ಗಾತ್ರ

ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಆರ್‌.ಡಿ. ಪಾಟೀಲನನ್ನು ಬಂಧಿಸುವಲ್ಲಿ ವಿಳಂಬ ಮಾಡಿ, ತಪ್ಪಿಸಿಕೊಳ್ಳಲು ಅನುವು ಮಾಡಿಕೊಟ್ಟಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಅಫಜಲಪುರ ಪೊಲೀಸ್‌ ಠಾಣೆಯ ಸಿಪಿಐ ಪಂಡಿತ ವಿ. ಸಗರ ಅವರನ್ನು ಅಮಾನತು ಮಾಡಲಾಗಿದೆ.

ಕರ್ತವ್ಯ ನಿರ್ಲಕ್ಷ್ಯ ಆರೋಪದ ಅಡಿಯಲ್ಲಿ ಪಂಡಿತ ವಿ. ಸಗರ ಅವರನ್ನು ಅಮಾನತು ಮಾಡಿ ಕಲಬುರಗಿ ಐಜಿಪಿ ಅಜಯ್ ಹಿಲೋರಿ ಅವರು ಆದೇಶ ಹೊರಡಿಸಿದ್ದಾರೆ.

ಕೆಇಎ ನೇಮಕಾತಿ ಪರೀಕ್ಷಾ ಅಕ್ರಮದ ಬಳಿಕ ತಲೆ ಮರೆಸಿಕೊಂಡಿದ್ದ ಆರ್‌.ಡಿ. ಪಾಟೀಲ, ನಗರದ ಅಪಾರ್ಟ್‌ಮೆಂಟ್ ಒಂದರಲ್ಲಿ ವಾಸವಾಗಿದ್ದ. ನವೆಂಬರ್‌ 6ರಂದು ಬೆಳಿಗ್ಗೆ ಈ ಬಗ್ಗೆ ಮಾಹಿತಿ ಲಭಿಸಿದರೂ ಬಂಧಿಸಲು ತಕ್ಷಣ ತೆರಳದೇ ವಿಳಂಬ ಮಾಡಿದ್ದ ಆರೋಪ ಪಂಡಿತ ಅವರ ಮೇಲೆ ಕೇಳಿಬಂದಿತ್ತು. ಈ ಕಾರಣಕ್ಕಾಗಿಯೇ ಅವರನ್ನು ಅಮಾನತು ಮಾಡಲಾಗಿದೆ ಎನ್ನಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT