ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾರಿ ಡಿಕ್ಕಿ: 6 ತಿಂಗಳ ಮಗು, ತಾಯಿ ಸಾವು

Last Updated 24 ಮೇ 2019, 12:29 IST
ಅಕ್ಷರ ಗಾತ್ರ

ಕಲಬುರ್ಗಿ: ನಗರದ ಸೇಡಂ ರಸ್ತೆಯ ಬಸವೇಶ್ವರ ಆಸ್ಪತ್ರೆಯ ಬಳಿ ಶುಕ್ರವಾರ ಮಹಾನಗರ ಪಾಲಿಕೆಯ ಕಸ ಸಾಗಿಸುವ ಲಾರಿ ಡಿಕ್ಕಿ ಹೊಡೆದು 6 ತಿಂಗಳ ಮಗು ಹಾಗೂ ತಾಯಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಜಾದಪುರ ರಸ್ತೆಯ ಉಮರ್ ಕಾಲೊನಿ ನಿವಾಸಿಗಳಾದ ಇನ್ಶಿರಾ ಮಹ್ಮದಿ (6 ತಿಂಗಳು), ತಾಯಿ ಸುಲ್ತಾನಾ ಬೇಗಂ (30) ಮೃತಪಟ್ಟವರು. 9 ವರ್ಷದ ಸಾಯಮಾ ನಾಜಾ ಕಾಲಿಗೆ ಗಂಭೀರ ಗಾಯವಾಗಿದ್ದು, ಈಕೆಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದ ಕಣ್ಣಿ ಮಾರ್ಕೆಟ್‌ನಲ್ಲಿ ತರಕಾರಿ ವ್ಯಾಪಾರಿಯಾಗಿರುವ ಸುಲ್ತಾನಾ ಅವರ ಪತಿ ಮಹ್ಮದ್ ರಫೀಕ್ ಅವರು ಬೈಕ್‌ನಲ್ಲಿ ಕುಟುಂಬದೊಂದಿಗೆ ತೆರಳುತ್ತಿದ್ದರು. ಈ ವೇಳೆ ಲಾರಿ ಡಿಕ್ಕಿ ಹೊಡೆದಿದೆ.

ಅಪಘಾತದಿಂದಾಗಿ ಸೇಡಂ ರಸ್ತೆಯಲ್ಲಿ ಕೆಲಹೊತ್ತು ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಸಂಚಾರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT