ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಮಿತಿ ಕೇಂದ್ರದ ಅಧಿಕಾರಿ ವಿರುದ್ಧ ಕ್ರಮಿನಲ್ ಮೊಕದ್ದಮೆ

Last Updated 25 ಮೇ 2019, 12:35 IST
ಅಕ್ಷರ ಗಾತ್ರ

ಕಲಬುರ್ಗಿ: ಕಟ್ಟಡ ಮತ್ತು ಇತರ ಕಾಮಗಾರಿಗಳಲ್ಲಿ ಸರ್ಕಾರದ ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ನಿರ್ಮಿತಿ ಕೇಂದ್ರ ಯೋಜನಾ ವ್ಯವಸ್ಥಾಪಕ ಶಿವಯೋಗಿ ಯಳವಾರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.

ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಎಚ್‌ಕೆಆರ್‌ಡಿಬಿಯ) ವಿವಿಧ ಕಾಮಗಾರಿಗಳನ್ನು ನಿರ್ಮಿತಿ ಕೇಂದ್ರಕ್ಕೆ ವಹಿಸಲಾಗಿತ್ತು. ಒಟ್ಟು 33 ಕಾಮಗಾರಿಗಳಲ್ಲಿ ಸುಮಾರು ₹1.52 ಕೋಟಿ ಹೆಚ್ಚಿನ ಹಣವನ್ನು ಇವರು ದುರುಪಯೋಗ ಪಡಿಸಿಕೊಂಡಿದ್ದರು. ಈ ಕುರಿತು ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಎಚ್‌ಕೆಆರ್‌ಡಿಬಿ ಕಾರ್ಯದರ್ಶಿ ಅವರು ಜಿಲ್ಲಾಧಿಕಾರಿಗೆ ಸೂಚಿಸಿದ್ದರು.

ಜಿಲ್ಲಾಧಿಕಾರಿ ಈ ಬಗ್ಗೆ ಸೂಚನೆ ನೀಡಿದರೂ ಯಳವಾರ ದುರುಪಯೋಗ ಪಡಿಸಿಕೊಂಡ ಹಣವನ್ನು ಸರ್ಕಾರಕ್ಕೆ ಮರುಪಾವತಿಸಲಿಲ್ಲ. ಹೀಗಾಗಿ ಇವರ ವಿರುದ್ಧ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.

ಟ್ರ್ಯಾಕ್ಟರ್ ಜಪ್ತಿ

ಅಫಜಲಪುರ ಸಮೀಪದ ಸೊನ್ನ ಗ್ರಾಮದ ಬಳಿಯ ಭೀಮಾ ನದಿಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ಈಚೆಗೆ ಜಪ್ತಿ ಮಾಡಿಕೊಳ್ಳಲಾಗಿದೆ.

ಭೀಮಾ ನದಿಯಿಂದ ಮರಳು ತುಂಬಿಕೊಂಡು ಬಳೂಂಡಗಿ, ಕರಜಗಿ ಮಾರ್ಗದಲ್ಲಿ ಸಾಗಿಸುತ್ತಿದ್ದಾಗ ಟ್ರ್ಯಾಕ್ಟರ್ ಜಪ್ತಿ ಮಾಡಿಕೊಳ್ಳಲಾಗಿದ್ದು, ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT