ಭಾನುವಾರ, ಮೇ 29, 2022
31 °C

ನಿವೇಶನ ಕೊಡಿಸುವುದಾಗಿ ವಂಚಿಸಿದ್ದ ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ಗ್ರಾಮ ಪಂಚಾಯಿತಿ ವತಿಯಿಂದ ನಿವೇಶನ ಕೊಡಿಸುವುದಾಗಿ ಇಬ್ಬರಿಂದ ತಲಾ ₹ 6 ಲಕ್ಷದಂತೆ ₹ 12 ಲಕ್ಷ ಪಡೆದುಕೊಂಡು ಪರಾರಿಯಾಗಿದ್ದ ಗಣೇಶ ನಗರದ ನಿವಾಸಿ ಗುಂಡೂರಾವ್ ಪ್ರಭಾಕರ ಯರಬಾರಕರ್ ಎಂಬಾತನನ್ನು ವಿಶ್ವವಿದ್ಯಾಲಯ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕುಸನೂರ ಗ್ರಾಮ ಪಂಚಾಯಿತಿ ವತಿಯಿಂದ ಜಿಡಿಎ ನಿವೇಶನಗಳನ್ನು ಹಂಚಿಕೆ ಮಾಡಲು ಸರ್ಕಾರ ಅನುಮತಿ ನೀಡಿದೆ ಎಂದು ಸುಳ್ಳು ಮಾಹಿತಿ ನೀಡಿದ ಗುಂಡೂರಾವ್ ಸ್ಟೇಶನ್ ರಸ್ತೆಯ ಪ್ರೀತಿ ರಾಘವೇಂದ್ರ ಹಾಗೂ ಮಲ್ಲ‍ಮ್ಮ ವಿಶ್ವನಾಥ ಸಾಳ ಎಂಬುವವರಿಂದ 2017ರ ಅಕ್ಟೋಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ಹಣ ಪಡೆದಿದ್ದ. ಇದಕ್ಕೆ ಪ್ರತಿಯಾಗಿ ಗ್ರಾಮ ಪಂಚಾಯಿತಿ ಕಾರ್ಯಾಲಯದ ನಕಲಿ ರಸೀದಿ ಕೊಟ್ಟು ಮೋಸ ಮಾಡಿದ್ದ ಎಂದು ಹಣ ಕಳೆದುಕೊಂಡವರು ದೂರು ನೀಡಿದ್ದರು.

ಡಿಸಿಪಿ ಅಡ್ಡೂರು ಶ್ರೀನಿವಾಸಲು, ಉಪನಗರ ಎಸಿ‍ಪಿ ಜೆ.ಎಚ್‌. ಇನಾಮದಾರ ಮಾರ್ಗದರ್ಶನದಲ್ಲಿ ವಿಶ್ವವಿದ್ಯಾಲಯ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಶಿವಾನಂದ ಘಾಣಿಗೇರ, ಸಿಬ್ಬಂದಿಯಾದ ಹುಸೇನ್‌ಸಾಬ್, ವಿಶ್ವನಾಥ, ಪ್ರಭಾಕರ, ಚನ್ನವೀರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು