ಶನಿವಾರ, ಮೇ 21, 2022
27 °C

ಫರಹತಾಬಾದ್: ಯುವಕ ನೇಣಿಗೆ ಶರಣು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಫರಹತಾಬಾದ್ (ಕಲಬುರ್ಗಿ): ಸಮೀಪದ ಫರಹತಾಬಾದ್‌ ಗ್ರಾಮದಲ್ಲಿ ಶನಿವಾರ ಯುವಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಗರದ ಕಾಕಡೆ ಚೌಕ್‌ನ ನಿವಾಸಿ ಸುನೀಲಕುಮಾರ ಶ್ರೀಮಂತ (28) ಆತ್ಮಹತ್ಯೆ ಮಾಡಿಕೊಂಡವರು. ಈ ಯುವಕ ಮದ್ಯ ಕುಡಿದ ಅಮಲಿನಲ್ಲಿ ಮನೆ ಬಿಟ್ಟು ಹೋಗಿದ್ದ. ಮೂರು ದಿನಗಳ ನಂತರ ಫರಹಾತಾಬಾದ್‌ ಬಳಿಯ ಹೊಲವೊಂದರಲ್ಲಿ ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಅವರು ‘ಡೆತ್‌ನೋಟ್‌’ ಬರೆದಿಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಗೆ ನಿಖರ ಕಾರಣ ಗೊತ್ತಾಗಿಲ್ಲ. ಫರಹತಾಬಾದ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು