ಕಲಬುರಗಿ: ಪ್ರಸಕ್ತ ಸಾಲಿನ ಬೆಳೆ ವಿಮೆ ಸ್ಥಳೀಯ ವಿಕೋಪದಡಿ ಜಿಲ್ಲೆಯ ಒಟ್ಟು 2,03,720 ರೈತರಿಗೆ ₹76.94 ಕೋಟಿ ಪರಿಹಾರ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ತಿಳಿಸಿದ್ದಾರೆ.

ರೈತರು ಬ್ಯಾಂಕ್ಗಳಿಗೆ ಭೇಟಿ ನೀಡಿ ತಮ್ಮ ಖಾತೆಗೆ ಪರಿಹಾರ ಹಣ ಜಮೆಯಾಗಿರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಕೋರಿದ್ದಾರೆ.

2024ನೇ ಸಾಲಿನ ಆಗಸ್ಟ್ ಕೊನೆಯ ವಾರ ಹಾಗೂ ಸೆಪ್ಟೆಂಬರ್ ಮೊದಲ ವಾರದಲ್ಲಿ ಸುರಿದ ಮಳೆಯಿಂದಾಗಿ ವಿವಿಧ ಬೆಳೆಗಳು ಹಾಳಾಗಿದ್ದವು. ಹಾಳಾದ ಬೆಳೆಗಳ ಬಗ್ಗೆ ರೈತರು ವಿಮೆ ಕಂಪನಿಗೆ ದೂರು ಸಲ್ಲಿಸಿದ್ದರು.

ದೂರಿನನ್ವಯ ಇದೀಗ ಬೆಳೆ ವಿಮೆ ಪರಿಹಾರ ಜಮೆ ಮಾಡಲಾಗಿದೆ. ಇದರ ಹೊರತಾಗಿ ಬಾಕಿ ಉಳಿದ ಅರ್ಹ ರೈತರಿಗೆ ಅಂತಿಮ ಪಾವತಿಯನ್ನು ಬೆಳೆ ಕಟಾವು ಪ್ರಯೋಗಗಳ ಆಧಾರದ ಮೇಲೆ ನಿರ್ಧರಿಸಿ ನೀಡಲಾಗುತ್ತದೆ ಎಂದಿದ್ದಾರೆ.

2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಯೋಜನೆಯಡಿ ತೊಗರಿ, ಹೆಸರು, ಉದ್ದು, ಸೋಯಾಬೀನ್, ಹತ್ತಿ ಹಾಗೂ ಇತರೆ ಬೆಳೆಗಳಿಗೆ ಒಟ್ಟಾರೆ ಜಿಲ್ಲೆಯಲ್ಲಿ 2,04,073 ರೈತರು ಬೆಳೆ ವಿಮೆ ನೋಂದಣಿ ಮಾಡಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.