‘ಕೆಕೆಆರ್‌ಡಿಬಿ ಅನುದಾನದ ನಿರೀಕ್ಷೆ’
‘ಪ್ರಾಧಿಕಾರಕ್ಕೆ ಕೆಕೆಆರ್‌ಡಿಬಿ ಅನುದಾನದಲ್ಲಿ ಶೇ 5ರಿಂದ ಶೇ 10ರಷ್ಟು ಅನುದಾನ ನೀಡುವಂತೆ ಮನವಿ ಸಲ್ಲಿಸಲಾಗಿದೆ. ಅಂದಾಜು ₹100 ಕೋಟಿ ಅನುದಾನ ನೀಡುವ ಭರವಸೆ ದೊರೆತಿದೆ. ಅದು ಸಿಕ್ಕರೆ ಕಲ್ಯಾಣ ಕರ್ನಾಟಕ ಭಾಗದ ಐದು ಜಿಲ್ಲೆಗಳ 23 ತಾಲ್ಲೂಕುಗಳ ಸರ್ಕಾರಿ ಶಾಲೆಗಳ ಸಬಲೀಕರಣ ಗ್ರಂಥಾಲಯ ಕನ್ನಡ ದಿನಪತ್ರಿಕೆಗಳ ಪೂರೈಕೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವಂಥ ಚಟುವಟಿಕೆಗೆ ವಿನಿಯೋಗಿಸಲಾಗುವುದು’ ಎಂದು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು.