ಕಲಬುರ್ಗಿ: ‘ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ 67 ಸಹ ಪ್ರಾಧ್ಯಾಪಕರು ಹಾಗೂ ಪ್ರಾಧ್ಯಾಪಕರ ಆಯ್ಕೆ ಪಟ್ಟಿಗೆ ಅನುಮೋದನೆ ನೀಡಲು ವಿ.ವಿ.ಯ ಉನ್ನತಾಧಿಕಾರ ಸಮಿತಿಯಾದ ಕಾರ್ಯನಿರ್ವಾಹಕ ಮಂಡಳಿ (ಇ.ಸಿ.) ನಿರಾಕರಿಸಿದೆ’ ಎಂದು ಮೂಲಗಳು ತಿಳಿಸಿವೆ.

‘ಮಂಡಳಿಯ ಒಪ್ಪಿಗೆ ದೊರೆತರೆ ಮಾತ್ರ ನೇಮಕಾತಿ ಮಾಡಿಕೊಳ್ಳಲು ಅವಕಾಶವಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ನಿರ್ದಿಷ್ಟ ಮಾನದಂಡಗಳನ್ನು ಅನುಸರಿಸಿಲ್ಲ ಎಂದು ವಿವಿಧ ಸಂಘಟನೆಗಳು ಆರೋಪಿಸಿದ್ದವು.ಅಲ್ಲದೇ, ಆಯ್ಕೆ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸುವಂತೆ ಸಂಸದ ಡಾ.ಉಮೇಶ ಜಾಧವ್ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ ಪೋಕ್ರಿಯಾಲ್ ಅವರಿಗೆ ಪತ್ರ ಬರೆದಿದ್ದರು. ಹೀಗಾಗಿ, ಶುಕ್ರವಾರ ನಡೆದ ಸಭೆಯಲ್ಲಿ ಮಂಡಳಿಯ ಕೆಲ ಸದಸ್ಯರು ಪಟ್ಟಿಗೆ ಅನುಮೋದನೆ ನೀಡಲು ನಿರಾಕರಿಸಿದರು’ ಎಂಬುದು ಮೂಲಗಳ ಮಾಹಿತಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.