ಸೋಮವಾರ, ಏಪ್ರಿಲ್ 6, 2020
19 °C

ಸಿಯುಕೆ: ಪ್ರಾಧ್ಯಾಪಕರ ಆಯ್ಕೆ ಪಟ್ಟಿಗೆ ಸಿಗದ ಸಮ್ಮತಿ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ‘ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ 67 ಸಹ ಪ್ರಾಧ್ಯಾಪಕರು ಹಾಗೂ ಪ್ರಾಧ್ಯಾಪಕರ ಆಯ್ಕೆ ಪಟ್ಟಿಗೆ ಅನುಮೋದನೆ ನೀಡಲು ವಿ.ವಿ.ಯ ಉನ್ನತಾಧಿಕಾರ ಸಮಿತಿಯಾದ ಕಾರ್ಯನಿರ್ವಾಹಕ ಮಂಡಳಿ (ಇ.ಸಿ.) ನಿರಾಕರಿಸಿದೆ’ ಎಂದು ಮೂಲಗಳು ತಿಳಿಸಿವೆ.

‘ಮಂಡಳಿಯ ಒಪ್ಪಿಗೆ ದೊರೆತರೆ ಮಾತ್ರ ನೇಮಕಾತಿ ಮಾಡಿಕೊಳ್ಳಲು ಅವಕಾಶವಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ನಿರ್ದಿಷ್ಟ ಮಾನದಂಡಗಳನ್ನು ಅನುಸರಿಸಿಲ್ಲ ಎಂದು ವಿವಿಧ ಸಂಘಟನೆಗಳು ಆರೋಪಿಸಿದ್ದವು. ಅಲ್ಲದೇ, ಆಯ್ಕೆ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸುವಂತೆ ಸಂಸದ ಡಾ.ಉಮೇಶ ಜಾಧವ್‌ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ ಪೋಕ್ರಿಯಾಲ್‌ ಅವರಿಗೆ ಪತ್ರ ಬರೆದಿದ್ದರು. ಹೀಗಾಗಿ, ಶುಕ್ರವಾರ ನಡೆದ ಸಭೆಯಲ್ಲಿ ಮಂಡಳಿಯ ಕೆಲ ಸದಸ್ಯರು ಪಟ್ಟಿಗೆ ಅನುಮೋದನೆ ನೀಡಲು ನಿರಾಕರಿಸಿದರು’ ಎಂಬುದು ಮೂಲಗಳ ಮಾಹಿತಿ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು