ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರೀಯ ವಿವಿ ಸಾಮಾನ್ಯ ಪ್ರವೇಶ ಪರೀಕ್ಷೆ: ಅರ್ಜಿ ಸಲ್ಲಿಕೆಗೆ 23 ಕೊನೆ ದಿನ

Last Updated 16 ಮೇ 2020, 15:12 IST
ಅಕ್ಷರ ಗಾತ್ರ

ಕಲಬುರ್ಗಿ:ಆಳಂದ ತಾಲ್ಲೂಕು ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಮೇ 23ರ ಕೊನೆ ದಿನವಾಗಿದೆ ಎಂದು ಕುಲಪತಿ ಪ್ರೊ.ಎಚ್.ಎಂ.ಮಹೇಶ್ವರಯ್ಯ ತಿಳಿಸಿದ್ದಾರೆ.

13 ವಿಷಯಗಳಲ್ಲಿ ಪಿಎಚ್‌.ಡಿ., 28 ವಿಭಾಗಗಳಲ್ಲಿ ಸ್ನಾತಕೋತ್ತರ ಮತ್ತು 11 ವಿಭಾಗಗಳಲ್ಲಿ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಕೇಂದ್ರೀಯ ವಿಶ್ವವಿದ್ಯಾಲಯ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಯುಸಿಇಟಿ)ಯ ಮೂಲಕ ಪ್ರವೇಶ ನೀಡಲಾಗುವುದು. ಈ ಪ್ರವೇಶ ಪರೀಕ್ಷೆಯ ದಿನಾಂಕ ಇನ್ನಷ್ಟೇ ನಿಗದಿಯಾಗಬೇಕಿದೆ ಎಂದು ಅವರು ಹೇಳಿದ್ದಾರೆ.

ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳಿಗೆ 371 (ಜೆ) ಅಡಿ ಶೈಕ್ಷಣಿಕ ಮೀಸಲಾತಿ ಲಭ್ಯ. ರಾಜ್ಯದಲ್ಲಿ ಕಲಬುರ್ಗಿ, ಬೀದರ್‌, ರಾಯಚೂರು, ಯಾದಗಿರಿ, ಬಳ್ಳಾರಿ,ಬೆಂಗಳೂರು, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ, ಮಂಗಳೂರು, ಮೈಸೂರುಗಳಲ್ಲಿ ಪರೀಕ್ಷಾ ಕೇಂದ್ರಗಳಿವೆ. ಮಾಹಿತಿಗೆhttps://www.cuk.ac.in, www.cucetexam.in ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT