ಮಂಗಳವಾರ, ಜೂನ್ 28, 2022
23 °C

ಸಿಯುಕೆ: ಐವರು ವಿದ್ಯಾರ್ಥಿಗಳ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ವಿದ್ಯಾರ್ಥಿನಿಯರ ವಸತಿ ನಿಲಯದ ಬಳಿ ತೆರಳಿ ಅನುಚಿತವಾಗಿ ವರ್ತನೆ ತೋರಿದ ಆರೋಪದ ಮೇರೆಗೆ ಇಲ್ಲಿನ ಕಡಗಂಚಿ ಬಳಿ ಇರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಶಿಸ್ತು ಸಮಿತಿಯು ಐವರು ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ.

ಇಂಗ್ಲಿಷ್ ವಿಭಾಗಕ್ಕೆ ಸೇರಿದ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ವಾಣಿಜ್ಯಶಾಸ್ತ್ರ ವಿಭಾಗದ 4ನೇ ಸೆಮಿಸ್ಟರ್ ವಿದ್ಯಾರ್ಥಿ ಬಿ. ಭಾರದ್ವಾಜ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗದ ಸಂಶೋಧನಾ ವಿದ್ಯಾರ್ಥಿ ಡಿ. ರಾಮು ನಾಯಕ್, ವ್ಯವಹಾರ ಅಧ್ಯಯನ ವಿಭಾಗದ ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿ ಮಧು ಸಾಯಿ, ಇಂಗ್ಲಿಷ್ ವಿಭಾಗದ 4ನೇ ಸೆಮಿಸ್ಟರ್ ವಿಭಾಗದ ಪದವಿ ವಿದ್ಯಾರ್ಥಿ ಅಜಯ್ ನಾಯಕ್ ಹಾಗೂ ಇವರ ಸೂಚನೆ ಮೇರೆಗೆ ವಿದ್ಯಾರ್ಥಿನಿಯನ್ನು ವಸತಿ ನಿಲಯದ ದ್ವಾರದ ಬಳಿ ಕರೆತಂದ ಆರೋಪದ ಮೇರೆಗೆ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ 4ನೇ ಸೆಮಿಸ್ಟರ್‌ನ ದೀಪಾಂಜಲಿ ಬರಾಲ ಎಂಬ ವಿದ್ಯಾರ್ಥಿನಿಯನ್ನು ಅಮಾನತುಗೊಳಿಸಲಾಗಿದೆ.

‘ವಿಶ್ವವಿದ್ಯಾಲಯಕ್ಕೆ ದೇಶದ ವಿವಿಧ ರಾಜ್ಯಗಳಿಂದ ವಿದ್ಯಾರ್ಥಿಗಳು ಬರುತ್ತಾರೆ. ಅನುಚಿತವಾಗಿ ವರ್ತಿಸುವುದನ್ನು ವಿಶ್ವವಿದ್ಯಾಲಯ ಸಹಿಸುವುದಿಲ್ಲ ಎಂಬ ಸಂದೇಶ ನೀಡಲು ವಿ.ವಿ. ಶಿಸ್ತು ಸಮಿತಿಯು ಈ ಕ್ರಮ ಕೈಗೊಂಡಿದೆ’ ಎಂದು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಬಸವರಾಜ ಡೋಣೂರ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು