ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾದಕ ದ್ರವ್ಯ ಸಾಗಣೆ: ಮೂವರ ಬಂಧನ

Last Updated 3 ಜುಲೈ 2022, 2:38 IST
ಅಕ್ಷರ ಗಾತ್ರ

ವಿಟ್ಲ: ಅಕ್ರಮವಾಗಿ ಮಾದಕ ದ್ರವ್ಯಗಳನ್ನು ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಆರೊಪಿಗಳಿಂದ ಮಾದಕ ವಸ್ತುಗಳಾದ ಎಂಡಿಎಂಎ, ಗಾಂಜಾ, ಕೃತ್ಯಕ್ಕೆ ಬಳಸಿದ ಆಟೊ ರಿಕ್ಷಾ ಹಾಗೂ ತಲವಾರು ವಶಪಡಿಸಿಕೊಳ್ಳಲಾಗಿದೆ.

ಬಂಧಿತರನ್ನು ನೆಲ್ಲಿಗುಡ್ಡೆಯ ರಹಿಮಾನ್, ಸಾಲೆತ್ತೂರು ಸಮೀಪದ ಕಟ್ಟೆತ್ತಿಲ್ಲ ಜಲಾಲುದ್ದೀನ್‌, ಒಕ್ಕೆತ್ತೂರು ಫೈಜಲ್ ಎಂದು ಗುರುತಿಸಲಾಗಿದೆ. ಈ ಆರೋಪಿಗಳ ವಿರುದ್ಧ ಈಗಾಗಲೇ ಕಳವು, ದರೋಡೆ ಸೇರಿ ಹಲವು ಪ್ರಕರಣಗಳು ದಾಖಲಾಗಿವೆ. ಆರೋಪಿಗಳು ಕೇರಳದಿಂದ ಕರ್ನಾಟಕದ ಭಾಗಗಳಿಗೆ ಮಾದಕ ದ್ರವ್ಯಗಳನ್ನು ಸಾಗಾಟ ಮಾಡುವ ಅಂತರರಾಜ್ಯ ಜಾಲದಲ್ಲಿ ಸಕ್ರಿಯರಾಗಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT