ಕಲಬುರಗಿ: ಯುವತಿಯರನ್ನು ಬಳಸಿಕೊಂಡು ಉದ್ಯಮಿಗಳಿಗೆ, ಅಧಿಕಾರಿಗಳಿಗೆ ಹನಿಟ್ರ್ಯಾಪ್ ಮಾಡಿ ಹಣ ವಸೂಲಿ ಮಾಡುತ್ತಿದ್ದ ಆರೋಪದಲ್ಲಿ ದಲಿತ ಸೇನೆಯ ಮುಖಂಡ ರಾಜು ಲೇಂಗಟಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ದಲಿತ ಸೇನೆ ಮುಖಂಡರ ವಿರುದ್ಧ ಮುಂಬೈ ಮೂಲದ ಯುವತಿ ಹಾಗೂ ಸ್ಥಳೀಯ ಮಹಿಳೆ ಸೇರಿ ಮೂವರು ಯುವತಿಯರನ್ನು ಅತ್ಯಾಚಾರ ಮತ್ತು ಬ್ಲಾಕ್‌ಮೇಲ್ ಮಾಡಿ ಬಳಕೆ ಮಾಡಿಕೊಂಡಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿ ನಡೆಸಿ ಆರೋಪ ಮಾಡಿದ್ದರು. ದೂರು ದಾಖಲಿಸಲು ಮುಂದಾದರೂ ಪೊಲೀಸರು ಎಫ್‌ಐಆರ್ ಮಾಡಿಕೊಂಡಿಲ್ಲ ಎಂದು ಆರೋಪಿಸಿದ್ದರು.
ಇದರ ಬೆನ್ನಲ್ಲೇ ಸ್ಟೇಶನ್ ಬಜಾರ್ ಠಾಣೆಯ ಪೊಲೀಸರು ಸಂತ್ರಸ್ತ ಯುವತಿಯರಿಂದ ಗುರುವಾರ ತಡ ರಾತ್ರಿ ದೂರು ದಾಖಲು ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಶುಕ್ರವಾರ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ. ಅವರು ಸಂತ್ರಸ್ತ ಮಹಿಳೆಯರನ್ನು ಭೇಟಿ ಮಾಡಿ ಅಹವಾಲು ಆಲಿಸಿದರು.