ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೃತ್ಯ, ಸಂಗೀತದ ರಸದೌತಣ

Last Updated 8 ನವೆಂಬರ್ 2019, 10:19 IST
ಅಕ್ಷರ ಗಾತ್ರ

ಕಲಬುರ್ಗಿ: ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಯುವಜನೋತ್ಸವದಲ್ಲಿ ಗುರುವಾರ ನೃತ್ಯ, ಸಂಗೀತ, ಹಾಡುಗಾರಿಕೆ, ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ, ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆಗಳು ನಡೆದವು.

ವಿಶ್ವವಿದ್ಯಾಲಯದ ಡಾ.ಬಿ.ಆರ್‌.ಅಂಬೇಡ್ಕರ್‌ ಸಭಾಂಗಣದಲ್ಲಿ ಪ್ರಮುಖ ನೃತ್ಯ ಕಾರ್ಯಕ್ರಮಗಳು ನಡೆದವು. ವಿದ್ಯಾರ್ಥಿನಿಯರ ಜನಪದ ನೃತ್ಯಗಳನ್ನು ಕಾಣಲು ಇಡೀ ಸಭಾಂಗಣದ ತುಂಬ ವಿದ್ಯಾರ್ಥಿಗಳು ತುಂಬಿಕೊಂಡಿದ್ದರು. ಡಿ.ಜೆ. ಸದ್ದನ್ನೂ ಮೀರಿಸುವ ಸಂಗೀತದ ಅಲೆ ಅಲೆಯಾಗಿ ಸಭಾಂಗಣದಲ್ಲಿ ತೇಲಿತು. ಇದಕ್ಕೆ ತಕ್ಕಂತೆ ಭಿನ್ನ ಉಡುಪುಗಳಿಂದ ಕಂಗೊಳಿಸುತ್ತಿದ್ದ ವಿದ್ಯಾರ್ಥಿ–ವಿದ್ಯಾರ್ಥಿನಿಯರು ಸಾಂಪ್ರದಾಯಿಕ ನೃತ್ಯ ಮಾಡಿದರು.

ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ, ಭಾಷಣ ಸ್ಪರ್ಧೆಗಳು ಯಾವುದೇ ಅಡತಡೆ ಇಲ್ಲದೆ ನಡೆದವು. ಕ್ಯಾಂಪಸ್‍ನ ಮೂರು ಕಡೆಗಳಲ್ಲಿ ಪ್ರತ್ಯೇಕ ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದ್ದು, ವಿ.ವಿ. ವ್ಯಾಪ್ತಿಯ ಕಲಬುರ್ಗಿ, ಬೀದರ್‌, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ 25 ಕಾಲೇಜುಗಳ 600ಕ್ಕೂ ಅಧಿಕ ವಿದ್ಯಾರ್ಥಿಗಳು ಯುವಜನೋತ್ಸವದಲ್ಲಿ ಭಾಗವಹಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ ಪ್ರಶಸ್ತಿ ಪ್ರದಾನ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT