ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರದೊಳಗೆ ಸಮಿತಿ ರಚಿಸಿ: ಡಿಸಿ ನಿರ್ದೇಶನ

ಜಿಲ್ಲಾಧಿಕಾರಿ ಜ್ಯೋತ್ಸ್ನಾ ನೇತೃತ್ವದಲ್ಲಿ ವಿಜನ್–2050 ಕುರಿತು ಮೊದಲ ಸಭೆ
Last Updated 10 ಜೂನ್ 2021, 5:24 IST
ಅಕ್ಷರ ಗಾತ್ರ

ಕಲಬುರ್ಗಿ: ಕಲಬುರ್ಗಿ ವಿಜನ್–2050 ಸಾಕಾರಗೊಳಿಸಲು ಇಲಾಖಾವಾರು ಸಮಿತಿಯನ್ನು ಒಂದು ವಾರದೊಳಗೆ ರಚಿಸಿ ಸದಸ್ಯರನ್ನು ನೇಮಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿ. ವಿ. ಜ್ಯೋತ್ಸ್ನಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬುಧವಾರ ಅಧಿಕಾರಿಗಳೊಂದಿಗೆ ಮೊದಲ ಸುತ್ತಿನ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಂದಿನ 30 ವರ್ಷಗಳಲ್ಲಿ ಜಿಲ್ಲೆಯಲ್ಲಿ ಕೈಗಾರಿಕೆ, ಕೃಷಿ, ಆರೋಗ್ಯ, ಪ್ರವಾಸೋದ್ಯಮ, ಕ್ರೀಡೆ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ನೀರಾವರಿ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಹೀಗೆ ಎಲ್ಲಾ ಕ್ಷೇತ್ರಗಳಲ್ಲಿ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲಾ ಇಲಾಖೆಗಳು ಕಾರ್ಯ ಪ್ರವೃತ್ತರಾಗಬೇಕು. ಅದಕ್ಕಾಗಿಯೇ 13ರಿಂದ 14 ಸಮಿತಿಗಳನ್ನು ರಚಿಸಿ, ಸಮಿತಿ ಮೂಲಕ ವಿಜನ್–2050 ಯೋಜನೆ ಸಾಕಾರಗೊಳಿಸಬೇಕು ಎಂದು ತಿಳಿಸಿದರು.

ಪ್ರತಿಯೊಂದು ಸಮಿತಿ ಚುನಾಯಿತ ಪ್ರತಿನಿಧಿ, ತಜ್ಞರು, ನಿವೃತ್ತ ಅಧಿಕಾರಿಗಳು, ಪತ್ರಕರ್ತರು ಒಳಗೊಂಡಂತೆ 10 ಜನರಿಂದ ಕೂಡಿರು
ವಂತೆ ರಚಿಸಬೇಕು. ಸಂಬಂಧಪಟ್ಟ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸಬೇಕು. ಸಮಿತಿ ರಚಿಸಿ ನಿಮ್ಮ ಹಂತದಲ್ಲಿ ಸಭೆ ನಡೆಸಿ ಕ್ಷೇತ್ರದ ಅಭಿವೃದ್ಧಿಗೆ ಸಮಿತಿ ಸದಸ್ಯರಿಂದ ಅಗತ್ಯ ಸಲಹೆ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಪಾಂಡ್ವೆ ಮಾತನಾಡಿ, ‘ನಮ್ಮ ವಿಜನ್ ಪ್ರಕಾರ ಮುಂದಿನ 30 ವರ್ಷಗಳಲ್ಲಿ ಜಿಲ್ಲೆ ಅಭಿವೃದ್ಧಿ ಹೊಂದಬೇಕಾದರೆ ಬರುವ 10 ವರ್ಷಗಳ ಆದಾಯ ಹೆಚ್ಚಿಸುವುದು ಅತೀ ಅವಶ್ಯ’ ಎಂದರು.

ಯೋಜನೆ ಸಾಕಾರಕ್ಕೂ ಮುನ್ನ ಮೊದಲಿಗೆ 5ರಿಂದ 10 ವರ್ಷಗಳಲ್ಲಿ ಯಾವ ರೀತಿಯಾಗಿ ಆದಾಯ ಬರಲಿದೆ ಎಂಬುದರ ಬಗ್ಗೆ ತಿಳಿಯುವುದು ಅವಶ್ಯಕ. ನಮ್ಮ ಭಾಗದಲ್ಲಿ ಕೃಷಿ ಪ್ರಮುಖವಾಗಿರುವುದರಿಂದ ಕೃಷಿಗೆ ಹೆಚ್ಚಿನ ಒತ್ತು ನೀಡಬೇಕು. ಇದಲ್ಲದೆ ಕೈಗಾರಿಕೆಗೂ ಮಹತ್ವ ನೀಡಬೇಕಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT