ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಸಚಿವರ ಗ್ರಾಮ ವಾಸ್ತವ್ಯ ಯಶಸ್ಸಿಗೆ ಡಿಸಿ ಸೂಚನೆ

Last Updated 18 ಆಗಸ್ಟ್ 2022, 6:20 IST
ಅಕ್ಷರ ಗಾತ್ರ

ಕಲಬುರಗಿ: ‘ಜಿಲ್ಲಾಧಿಕಾರಿ ನಡೆ-ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಪ್ರಯುಕ್ತ ಆಗಸ್ಟ್ 20ರಂದು ಕಂದಾಯ ಸಚಿವ ಆರ್. ಅಶೋಕ ಅವರು ಜಿಲ್ಲೆಯ ಸೇಡಂ ತಾಲ್ಲೂಕಿನ ಅಡಕಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದು, ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ಅಧಿಕಾರಿಗಳು ಕಾರ್ಯ
ನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ‘ಸಚಿವರು ರಾತ್ರಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಾಸ್ತವ್ಯ ಮಾಡುವರು. ತಂಗಲು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಬೇಕು. ಯಾವುದೇ ಕೊರತೆ ಆಗದಂತೆ ನೋಡಿಕೊಳ್ಳಬೇಕು’ ಎಂದರು.

‘ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಗ್ರಾಮ ಹಾಗೂ ತಾಂಡಗಳಿಂದ ಫಲಾನು
ಭವಿಗಳನ್ನು ಕರೆತರುವ ವ್ಯವಸ್ಥೆಯನ್ನು ಆಯಾ ಇಲಾಖೆಯ ಅಧಿಕಾರಿಗಳೇ ಮಾಡಬೇಕು. ಸರಿಯಾದ ವಾಹನ ವ್ಯವಸ್ಥೆ ಮಾಡಿಕೊಳ್ಳಬೇಕು’ ಎಂದರು.

‘ಕಾರ್ಯಕ್ರಮ ನಡೆಸುವ ಸ್ಥಳದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಅಚ್ಚುಕಟ್ಟಾಗಿ ಇರಬೇಕು. ವಾಹನಗಳಿಗೆ ನಿಲ್ದಾಣ ವ್ಯವಸ್ಥೆ ಕಲ್ಪಿಸಬೇಕು. ಪೊಲೀಸ್ ಬಂದೋಬಸ್ತ್, ರಸ್ತೆಯ ಬದಿಯಲ್ಲಿ ಬ್ಯಾರಿಕೇಡ್‌ ಹಾಕಿಸಬೇಕು. ಆರೋಗ್ಯ ಶಿಬಿರ ಆಯೋಜಿಸಿ, ಬಂದಂತಹ ಜನರನ್ನು ತಪಾಸಣೆಗೆ ಒಳಪಡಿಸಬೇಕು’ ಎಂದು ಅವರು ನಿರ್ದೇಶನ ನೀಡಿದರು.

‘ಕಾರ್ಯಕ್ರಮ ಯಶಸ್ಸಿಗೆ ವಿವಿಧ ಹಂತದ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿ ಈಗಾಗಲೇ ಆದೇಶ ಹೊರಡಿಸಲಾಗಿದೆ. ಅದನ್ನು ಚಾಚೂ ತಪ್ಪದೆ ಪಾಲಿಸಬೇಕು’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾ
ಶಂಕರ ತೆಗ್ಗೆಳ್ಳಿ, ಸೇಡಂ ವಿಭಾಗದ ಸಹಾಯಕ ಆಯುಕ್ತ ಕಾರ್ತಿಕ್, ಸೇಡಂ ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರು ಮತ್ತು ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT