ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘101.61 ಕೋಟಿ ಬೆಳೆ ವಿಮೆ ರೈತರ ಖಾತೆಗೆ ಜಮೆ’

Published 9 ಜೂನ್ 2024, 6:24 IST
Last Updated 9 ಜೂನ್ 2024, 6:24 IST
ಅಕ್ಷರ ಗಾತ್ರ

ಕಲಬುರಗಿ: ಕಳೆದ 2023–24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಮಾಡಿಸಿದ ರೈತರಿಗೆ ಬೆಳೆ ಕಟಾವು, ಸ್ಥಳೀಯ ಪ್ರಕೃತಿ ವಿಕೋಪ ಹಾಗೂ ಬೆಳೆ ರಾಶಿನಂತರ ಹಾನಿ ಪ್ರಕರಣಗಳಲ್ಲಿ ಒಟ್ಟಾರೆ 88,644 ರೈತರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ₹ 101.61 ಕೋಟಿ ಬೆಳೆ ವಿಮೆ ಪರಿಹಾರ ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ‌ ಬಿ. ಫೌಜಿಯಾ ತರನ್ನುಮ್ ತಿಳಿಸಿದ್ದಾರೆ. 

ಬೆಳೆ ಕಟಾವು ಆಧಾರದ ಮೇಲೆ ಮುಂಗಾರು ಬೆಳೆಗಳಾದ ಹೆಸರು, ಉದ್ದು, ಸೋಯಾಬೀನ್‌ ಹಾಗೂ ತೊಗರಿ ಬೆಳೆಗಳಿಗೆ ಜಿಲ್ಲೆಯ 69,829 ರೈತರ ಬ್ಯಾಂಕ್ ಖಾತೆಗೆ ₹ 94.558 ಕೋಟಿ, ಸ್ಥಳೀಯ ಪ್ರಕೃತಿ ವಿಕೋಪದಡಿ 18,433 ರೈತರ ಬ್ಯಾಂಕ್ ಖಾತೆಗೆ ₹ 6.24 ಕೋಟಿ ವಿಮೆ ಮೊತ್ತ ಹಾಗೂ ಬೆಳೆ ರಾಶಿ ಸಂದರ್ಭದಲ್ಲಿ ಆಗುವ ಹಾನಿ ಘಟಕದಡಿ 382 ರೈತರ ಬ್ಯಾಂಕ್ ಖಾತೆಗೆ ₹ 81.92 ಲಕ್ಷ ವಿಮೆ ಮೊತ್ತ ಪಾವತಿಸಲಾಗಿದೆ. ಹೀಗೆ ಒಟ್ಟು 88,644 ರೈತರ ಬ್ಯಾಂಕ್ ಖಾತೆಗೆ 101.61 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರು ಮಾಡಲಾಗಿದೆ. ಪರಿಹಾರ ಹಣ ಖಾತೆಗೆ ಜಮೆ ಪ್ರಕ್ರಿಯೆ ಕಳೆದೆರಡು ದಿನಗಳಿಂದ ನಿರಂತರ ನಡೆಯುತ್ತಿದ್ದು, ಒಂದೆರಡು ದಿನದಲ್ಲಿ ಉಳಿದ ರೈತರ ಖಾತೆಗೂ ಹಣ ಜಮೆಯಾಗಲಿದೆ ಎಂದಿದ್ದಾರೆ.

ಇದರಲ್ಲಿ 281 ರೈತರ ಬ್ಯಾಂಕ್ ಖಾತೆಗಳಿಗೆ ಆಧಾರ ಸಂಖ್ಯೆ ಜೋಡಣೆಯಾಗದ ಕಾರಣ ₹ 35.95 ಲಕ್ಷ ಪರಿಹಾರ ರೈತರ ಖಾತೆಗೆ ಜಮೆಯಾಗಿರುವುದಿಲ್ಲ. ಇಂತಹ ರೈತರ ವಿವರ ರೈತ ಸಂಪರ್ಕ ಕೇಂದ್ರದಲ್ಲಿ ಲಭ್ಯವಿದ್ದು, ಸಂಬಂಧಪಟ್ಟ ರೈತರು ತಮ್ಮ ಬ್ಯಾಂಕ್ ಖಾತೆಗೆ ಆಧಾರ ಜೋಡಣೆ ಮಾಡಿಸಿದಲ್ಲಿ ಬೆಳೆ ವಿಮೆ ಪರಿಹಾರ ಜಮೆಯಾಗಲಿದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT