ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರವಾಸೋದ್ಯಮ ಉತ್ತೇಜನಕ್ಕೆ ಸೂಚನೆ

ಚಿಂಚೋಳಿ: ಭೂರಕ್ಷಾ ಪ್ರಗತಿ ಪರಿಶೀಲಿಸಿದ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್
Published : 26 ಸೆಪ್ಟೆಂಬರ್ 2024, 16:00 IST
Last Updated : 26 ಸೆಪ್ಟೆಂಬರ್ 2024, 16:00 IST
ಫಾಲೋ ಮಾಡಿ
Comments

ಚಿಂಚೋಳಿ: ಭೂರಕ್ಷಾ ಯೋಜನೆ ಅಡಿಯಲ್ಲಿ ಇಲ್ಲಿನ ತಾಲ್ಲೂಕು ಆಡಳಿತಸೌಧದಲ್ಲಿ ನಡೆಯುತ್ತಿರುವ ಭೂದಾಖಲೆಗಳ ಗಣಕೀಕರಣದ ಪ್ರಗತಿ ಪರಿಶೀಲಿಸಿದ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಬೇಗ ಕೆಲಸ ಮುಗಿಸಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು.

ಭೂದಾಖಲೆಗಳ ಸ್ಕ್ಯಾನಿಂಗ್‌ ಪ್ರಕ್ರಿಯೆ ವೀಕ್ಷಿಸಿದ ಅವರು, ನಂತರ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ತಾಲ್ಲೂಕಿನಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿವೆ. ಆಯಾ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಯಿಂದ ಏನು ಮಾಡಲು ಸಾಧ್ಯವಿದೆ ಎಂಬುದನ್ನು ತಿಳಿಸಬೇಕು. ಕೆಲವು ಕೆಲಸಗಳನ್ನು ಗ್ರಾ.ಪಂ. ತಾ.ಪಂ. ಜಿಲ್ಲಾ ಪಂಚಾಯಿತಿ ಅನುದಾನದಲ್ಲಿಯೂ ನಡೆಸುವಂತಾಗಬೇಕು. ಇದಕ್ಕಾಗಿ ಅರಣ್ಯ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿ ವರದಿ ನೀಡಬೇಕು ಎಂದು ತಹಶೀಲ್ದಾರ್‌ ಸುಬ್ಬಣ್ಣ ಜಮಖಂಡಿ ಅವರಿಗೆ ಸೂಚಿಸಿದರು.

ಸಭೆಯಲ್ಲಿ ಗ್ರೇಡ್-2 ತಹಶೀಲ್ದಾರ್‌ ವೆಂಕಟೇಶ ದುಗ್ಗನ್, ತಾ.ಪಂ.ಇಒ ಶಂಕರ್‌ ರಾಠೋಡ್, ಲೋಕೋಪಯೋಗಿ ಇಲಾಖೆಯ ಎಇಇ ಬಸವರಾಜ ಬೈನೂರು, ಟಿಎಚ್‌ಒ ಮಹಮದ್ ಗಫಾರ್, ಸಹಾಯಕ ಕೃಷಿ ನಿರ್ದೇಶಕ ವೀರಶೆಟ್ಟಿ ರಾಠೋಡ್, ಬಿಇಒ ವಿ.ಲಕ್ಷ್ಮಯ್ಯ, ಕಂದಾಯ ನಿರೀಕ್ಷಕ ರವಿ ಪಾಟೀಲ, ಕೇಶವ ಕುಲಕರ್ಣಿ, ಆರೀಫ್, ಭೀಮರಡ್ಡಿ, ರಾಜಕುಮಾರ ಗೋವಿನ್, ಜಯಪ್ಪ ಚಾಪಲ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT